ಪ್ರಪಂಚದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕೆಜಿಎಫ್ ಸಿನಿಮಾ, ಈಗ ಪಾಕಿಸ್ತಾನದಲ್ಲೂ ತನ್ನ ಹವಾ ಎಬ್ಬಿಸಿದೆ. ಈ ಮೂಲಕ ಪಾಕಿಸ್ತಾನದಲ್ಲಿ ರಿಲೀಸ್ ಆದ ಮೊದಲ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಕೆಜಿಎಫ್ ಪಾತ್ರವಾಗ್ತಿದೆ. ಪಾಕಿಸ್ತಾನದಲ್ಲಿ ಟಿಕೆಟ್ ಬುಕ್ಕಿಂಗ್ ಆರಂಭವಾಗಿದ್ದು, ಇಸ್ಲಾಮಾಬಾದ್ ಕ್ಲಬ್ ಟಿಕೆಟ್ ಬುಕ್ಕಿಂಗ್ ಸೈಟ್ ನಲ್ಲಿ ಇಂದಿನಿಂದ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ.