ಸುದೀಪ್ ನಟನೆಯ ಪೈಲ್ವಾನ್ ಸಿನಿಮಾದಲ್ಲಿ 'ಕುಸ್ತಿ' ಗೆ ಹೆಚ್ಚಿನ ಫೋಕಸ್

ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ಶೂಟಿಂಗ್ ಅಂತಿಮ ಹಂತ ತಲುಪಿದೆ, ಎಸ್.ಕೃಷ್ಣ ನಿರ್ದೇಶನದ ಪೈಲ್ವಾನ್ ಸಿನಿಮಾ ಮೈಸೂರಿನಲ್ಲಿ ಶೂಟಿಂಗ್ ನಡೆಯುತ್ತಿದೆ....
ಪೈಲ್ವಾನ್ ಸಿನಿಮಾ ಪೋಸ್ಟರ್
ಪೈಲ್ವಾನ್ ಸಿನಿಮಾ ಪೋಸ್ಟರ್
ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ಶೂಟಿಂಗ್ ಅಂತಿಮ ಹಂತ ತಲುಪಿದೆ, ಎಸ್.ಕೃಷ್ಣ ನಿರ್ದೇಶನದ ಪೈಲ್ವಾನ್ ಸಿನಿಮಾ ಮೈಸೂರಿನಲ್ಲಿ ಶೂಟಿಂಗ್ ನಡೆಯುತ್ತಿದೆ.
ಸಂಕ್ರಾಂತಿ ಹಬ್ಬಕ್ಕೆ ಸಿನಿಮಾ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ, ಟೀಸರ್ 1 ನಿಮಿಷಕ್ಕೂ ಹೆಚ್ಚು ಸಮಯವಿದೆ, ಸಾಂಪ್ರಾದಾಯಿಕ ಶೈಲಿಯಾದ ಕುಸ್ತಿಗೆ ಸಿನಿಮಾದಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ, ಕುಸ್ತಿ ಸ್ಪರ್ಧೆಯಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ.
ಪೈಲ್ವಾನ್ ಸಿನಿಮಾದಲ್ಲಿ ಸುದೀಪ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೇಕ್ಷಕರು ಕುತೂಹಲ ಮೂಡಿಸಿದೆ, ಆರ್ ಆರ್ ಆರ್ ಮೋಷನ್ ಪಿಕ್ಚರ್ಸ್ ಸಿನಿಮಾದಡಿ ಸಿನಿಮಾ ನಿರ್ಮಾಣವಾಗಿದೆ, ಬೇಸಿಗೆ ಕಾಲದಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಪೈಲ್ವಾನ್ ಸಿನಿಮಾ 8 ಭಾಷೆಗಳಲ್ಲಿ ಡಬ್ಬಿಂಗ್ ಆಗಿ ರಿಲೀಸ್ ಆಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com