ಬೆಂಗಳೂರು: ಕನ್ನಡ ಚಿತ್ರರಂಗದ ಮಾಣಿಕ್ಯ, ಮಂಡ್ಯದ ಗಂಡು ಅಂಬರೀಶ್ ಅವರ ನಿಧನ ಹಿನ್ನೆಲೆಯಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ಯಾವ ಸ್ಟಾರ್ ನಟರು ಮುಂದಾಗುತ್ತಿಲ್ಲ.
ಇನ್ನು ಮುಂದಿನ ಫೆಬ್ರವರಿ 16ಕ್ಕೆ ದರ್ಶನ್ 42ನೇ ವರ್ಷಕ್ಕೆ ಕಾಲಿಡುತ್ತಿದ್ದು ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದು ದರ್ಶನ್ ತಮ್ಮ ಅಭಿಮಾನಿಗಳಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.