ಪ್ರಯೋಗಾತ್ಮಕ ಚಿತ್ರದಲ್ಲಿ ಸಂಗೀತಾ ಶೃಂಗೇರಿ!

ಹರ ಹರ ಮಹದೇವ ಧಾರಾವಾಹಿಯಲ್ಲಿ ಸತಿ ಪಾತ್ರದಲ್ಲಿ ಅಭಿನಯಿಸಿ ಜನಮನ್ನಣೆ ಗಳಿಸಿ ಕಿರುತೆರೆಯಿಂದ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿರುವ ಸಂಗೀತಾ ಶೃಂಗೇರಿಗೆ ಇದೀಗ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ...
ಸಂಗೀತಾ ಶೃಂಗೇರಿ
ಸಂಗೀತಾ ಶೃಂಗೇರಿ
Updated on: 
ಹರ ಹರ ಮಹದೇವ ಧಾರಾವಾಹಿಯಲ್ಲಿ ಸತಿ ಪಾತ್ರದಲ್ಲಿ ಅಭಿನಯಿಸಿ ಜನಮನ್ನಣೆ ಗಳಿಸಿ ಕಿರುತೆರೆಯಿಂದ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿರುವ ಸಂಗೀತಾ ಶೃಂಗೇರಿಗೆ ಇದೀಗ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸುವ ಅವಕಾಶಗಳು ಸಿಕ್ಕಿವೆ. 
ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಚಿತ್ರದಲ್ಲಿ ನಟಿಸಲಿದ್ದಾರೆ. ಇನ್ನು ಸಾಲಗಾರರ ಸಹಕಾರ ಸಂಘ ಹಾಗೂ ಕನ್ನಡ ಮೇಷ್ಟ್ರು ಚಿತ್ರಗಳ ಚಿತ್ರೀಕರಣ ಮುಕ್ತಾಯಗೊಂಡಿದೆ. ಕನ್ನಡ ಮೇಷ್ಟ್ರ ಚಿತ್ರವನ್ನು ಕನ್ನಡ ಹಿರಿಯ ನಿರ್ದೇಶಕ ಎಸ್ ಮಹೇಂದರ್ ನಿರ್ದೇಶಿಸುತ್ತಿದ್ದಾರೆ. 
ಕನ್ನಡ ಮೇಷ್ಟ್ರು ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಈ ಚಿತ್ರ ಕಲಾತ್ಮಕ ಚಿತ್ರವಾಗಿದೆ. ಚಿತ್ರದಲ್ಲಿ ಒಳ್ಳೆಯ ಸಂದೇಶವಿದೆ. ಭವಿಷ್ಯದಲ್ಲಿ ಇದೇ ರೀತಿಯ ಪಾತ್ರಗಳನ್ನು ನಿಭಾಯಿಸುತ್ತೇನೆ ಎಂಬುದು ಗೊತ್ತಿಲ್ಲ ಎಂದು ಸಂಗೀತಾ ಶೃಂಗೇರಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com