ಪೈಲ್ವಾನ್ ಚಿತ್ರಕ್ಕೆ ಅರ್ಜುನ್ ಜನ್ಯ ಹೊಸ ಪ್ರಯೋಗ

ಸದ್ಯ ಕನ್ನಡ ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕರ ಅರ್ಜುನ್ ಜನ್ಯ ಅವರು ಪೈಲ್ವಾನ್ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು ಈ ಚಿತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.
ಸುದೀಪ್
ಸುದೀಪ್
Updated on: 
ಸದ್ಯ ಕನ್ನಡ ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕರ ಅರ್ಜುನ್ ಜನ್ಯ ಅವರು ಪೈಲ್ವಾನ್ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು ಈ ಚಿತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.
ಪೈಲ್ವಾನ್ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಇದಕ್ಕೂ ಮುನ್ನ ಚಿತ್ರ ತಂಡ ದೊಡ್ಡದಾಗಿ ಆಡಿಯೋ ಬಿಡುಗಡೆಗೆ ಮುಂದಾಗಿದೆ. ಅಂತೆ ಇದೇ ತಿಂಗಳ 27ರಂದು ಆಡಿಯೋ ಬಿಡುಗಡೆಗೆ ಕೃಷ್ಣ ಅಂಡ್ ಟೀಂ ಪ್ಲ್ಯಾನ್ ಮಾಡಿಕೊಂಡಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. 
ಪೈಲ್ವಾನ್ ಚಿತ್ರ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಹೀಗಾಗಿ ಚಿತ್ರಕ್ಕೆ ಅರ್ಜುನ್ ಜನ್ಯ ಹೆಚ್ಚು ಶ್ರಮ ವಹಿಸಿ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ಹೊಸ ಪ್ರಯೋಗವನ್ನು ಜನ್ಯ ಮಾಡಿದ್ದಾರೆ. 
ಪೈಲ್ವಾನ್ ಚಿತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿದ್ದು ಸುದೀಪ್ ಗೆ ಜೋಡಿಯಾಗಿ ಆಕಾಂಕ್ಷ ಸಿಂಗ್ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com