ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕನ್ನಡ ಪರ ಸಂಘಟನೆಗಳು ರೊಚ್ಚಿಗೇದ್ದಿದ್ದೇಕೆ?

ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ರಶ್ಮಿಕಾ ಮಂದಣ್ಣ ಇತ್ತೀಚೆಗೆ ತಮಿಳು ಸಂದರ್ಶನವೊಂದರಲ್ಲಿ ನನಗೆ ಕನ್ನಡ ಸರಿಯಾಗಿ ಬರುವುದಿಲ್ಲ, ಅಲ್ಲದೆ...
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
Updated on
ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ರಶ್ಮಿಕಾ ಮಂದಣ್ಣ ಇತ್ತೀಚೆಗೆ ತಮಿಳು ಸಂದರ್ಶನವೊಂದರಲ್ಲಿ ನನಗೆ ಕನ್ನಡ ಸರಿಯಾಗಿ ಬರುವುದಿಲ್ಲ, ಅಲ್ಲದೆ ಕನ್ನಡ ಮಾತಾಡೋದು ತುಂಬಾ ಕಷ್ಟ ಎಂದು ಹೇಳಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 
ಕನ್ನಡ ಚಿತ್ರರಂಗದಿಂದ ಬೆಳೆದ ರಶ್ಮಿಕಾ ಮಂದಣ್ಣ ಇದೀಗ ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಅಲ್ಲದೆ ಬಹು ಬೇಡಿಕೆಯ ನಟಿಯಾಗಿರುವ ರಶ್ಮಿಕಾ ಸಂದರ್ಶನವೊಂದರಲ್ಲಿ ಈ ರೀತಿಯ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. 
ಇನ್ನು ರಶ್ಮಿಕಾ ಮಂದಣ್ಣ ವಿರುದ್ಧ ಕನ್ನಡಿಕರು ಭಾರೀ ಗರಂ ಆಗಿದ್ದಾರೆ. ಅಲ್ಲದೆ ರಶ್ಮಿಕಾರನ್ನು ಕನ್ನಡ ಚಿತ್ರರಂಗದಿಂದ ಬಹಿಷ್ಕರಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಕೆಲ ಕನ್ನಡ ಪರ ಸಂಘಟನೆಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲು ಮುಂದಾಗಿವೆ. 
ರಶ್ಮಿಕಾರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ರಶ್ಮಿಕಾ ವಿರುದ್ದ ನೆಟಿಗರು ಟ್ರೋಲ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com