ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಭಿಯಾನ: ನಟಿ ರಶ್ಮಿಕಾ ಮಂದಣ್ಣ ಮತ್ತಿತರರ ಬೆಂಬಲ

ಕರ್ನಾಟಕದ ಕಾಶ್ಮೀರ ಖ್ಯಾತಿಯ ಕೊಡಗು ಜಿಲ್ಲೆಗೆ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಹಲವು ಮೂಲಸೌಕರ್ಯಗಳಿಗೆ ಆಗ್ರಹಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ಆರಂಭವಾಗಿದೆ.
ರಶ್ಮಿಕಾ ಮಂದಣ್ಣ, ಹರ್ಷಿಕಾ ಪೊಣಚ್ಚ
ರಶ್ಮಿಕಾ ಮಂದಣ್ಣ, ಹರ್ಷಿಕಾ ಪೊಣಚ್ಚ
Updated on: 
ಬೆಂಗಳೂರು: ಕರ್ನಾಟಕದ ಕಾಶ್ಮೀರ ಖ್ಯಾತಿಯ ಕೊಡಗು ಜಿಲ್ಲೆಗೆ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಹಲವು ಮೂಲಸೌಕರ್ಯಗಳಿಗೆ ಆಗ್ರಹಿಸಿ ಸಾಮಾಜಿಕ ಮಾಧ್ಯಮದಲ್ಲಿ  ಅಭಿಯಾನ ಆರಂಭವಾಗಿದೆ. ರಾಜಕೀಯ, ಮಾಧ್ಯಮ, ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಈ ಅಭಿಯಾನಕ್ಕೆ   ಕೈ ಜೋಡಿಸಿದ್ದಾರೆ.
ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್ ಮತ್ತು ಕ್ರೇಜಿಸ್ಟಾರ್  ರವಿಚಂದ್ರನ್ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ ಬೆನ್ನಲ್ಲೇ  ಇದೀಗ ಸ್ಯಾಂಡಲ್ ವುಡ್ ನ ಹಲವು ನಟ, ನಟಿಯರು ಈ ಅಭಿಯಾನದ ಬೆಂಬಲಕ್ಕೆ ನಿಂತಿದ್ದಾರೆ. ಕೊಡಗಿನ ನಟಿಯರಾದ ರಶ್ಮಿಕ ಮಂದಣ್ಣ ಹಾಗೂ ಹರ್ಷಿಕಾ ಪೂಣಚ್ಚ ಟ್ವೀಟ್ ಮಾಡಿದ್ದಾರೆ.
ಕೂರ್ಗಿನಲ್ಲಿ ಅತ್ಯುತ್ತುಮವಾದ ಆಸ್ಪತ್ರೆ ಇಲ್ಲ, ಇದಕ್ಕಾಗಿ ನಾವು ದೂರ ಪ್ರಯಾಣಿಸಬೇಕಾಗಿದೆ. ಕೊಡಗಿನಲ್ಲಿ ಆಸ್ಪತ್ರೆಗೆ ಇದ್ದರೆ ಜನರಿಗೆ ತುಂಬಾ ಸಹಾಯವಾಗುತ್ತದೆ. ದಯವಿಟ್ಟು ಸ್ಪಂದಿಸಿ ಎಂದು # we need Emergency Hospital in kodagu ಹ್ಯಾಷ್ ಟ್ಯಾಗ್ ಬಳಸಿ ರಶ್ಮಿಕಾ ಮಂದಣ್ಣ ಟ್ವೀಟ್ ಮಾಡಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com