ಬಿಲ್ ಪಾವತಿಸದ ಪ್ರಕರಣಕ್ಕೆ ಸಂಬಂಧಿಸಿ ಯುಎನ್ಐ ಕನ್ನಡ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿರುವ ಪೂಜಾ ಗಾಂಧಿ, ತಾವು ಚಿತ್ರೀಕರಣವೊಂದರ ಸಂದರ್ಭದಲ್ಲಿ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದು ನಿಜ. ಆದರೆ ಬಾಕಿ ಉಳಿಸಿಕೊಂಡಿಲ್ಲ. ಈ ಸಂಬಂಧ ಇಂದು ಪೊಲೀಸ್ ಠಾಣೆ ಗೆ ತೆರಳಿ ಮೂರನೇ ವ್ಯಕ್ತಿಯೊಬ್ಬರ ಮಾಡಿರುವ ಆರೋಪಕ್ಕೂ ತಮಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿರುವುದಾಗಿ ತಿಳಿಸಿದ್ದಾರೆ.