ದತ್ತು ಪಡೆದ ಸರ್ಕಾರಿ ಶಾಲೆ ಮಕ್ಕಳೊಂದಿಗೆ ಹೋಳಿ ಆಚರಿಸಿದ ಪ್ರಣೀತಾ

ಬಹು ಭಾಷಾ ನಟಿ ಪ್ರಣೀತಾ ಸುಭಾಷ್ ಹಾಸನದಲ್ಲಿ ದತ್ತು ಪಡೆದಿದ್ದ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಹೋಳಿ ಹಬ್ಬ ಆಚರಿಸಿ, ಸಂಭ್ರಮಿಸಿದ್ದಾರೆ.
ಪ್ರಣೀತಾ
ಪ್ರಣೀತಾ

ಬೆಂಗಳೂರು: ಬಹು ಭಾಷಾ ನಟಿ ಪ್ರಣೀತಾ ಸುಭಾಷ್ ಹಾಸನದಲ್ಲಿ ದತ್ತು ಪಡೆದಿದ್ದ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಹೋಳಿ ಹಬ್ಬ ಆಚರಿಸಿ, ಸಂಭ್ರಮಿಸಿದ್ದಾರೆ.

ನಟನೆಯ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಪ್ರಣೀತಾ ಸುಭಾಷ್,  ಶಾಲೆಯನ್ನು ದತ್ತು ಪಡೆದ ಸಂದರ್ಭದಲ್ಲಿ ಹೋಳಿ ಹಬ್ಬಕ್ಕೆ ಬರುವುದಾಗಿ ಮಕ್ಕಳಿಗೆ ಭರವಸೆ ನೀಡಿದ್ದರಂತೆ. ಅದರಂತೆ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಹೋಳಿ ಆಚರಿಸಿದ್ದಾರೆ.

ಶಾಲಾ ಅಭಿವೃದ್ಧಿ ತಂಡದಿಂದ ದತ್ತು ಪಡೆದಿರುವ ಶಾಲೆಯನ್ನು ಬಣ್ಣಗಳಿಂದ ಆಲಂಕರಿಸುವ ಮೂಲಕ ಹೋಳಿ ಹಬ್ಬವನ್ನು ಸಂತೋಷದಿಂದ ಆಚರಿಸಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com