ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ನಿಧನ

ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ
ಮಾಸ್ಟರ್ ಹಿರಣ್ಣಯ್ಯ
Updated on
ಬೆಂಗಳೂರು: ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ  ಕೊನೆಯುಸಿರುಳೆದಿದ್ದಾರೆ.
ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಅನೇಕ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂಬುದು ತಿಳಿದುಬಂದಿದೆ.
ಬಿಜಿಎಸ್ ಆಸ್ಪತ್ರೆಯಿಂದ ಪಾರ್ಥಿವ ಶರೀರರನ್ನು ಬನಶಂಕರಿಯಲ್ಲಿರುವ  ನಿವಾಸಕ್ಕೆ ತರಲಾಗುತ್ತಿದ್ದು, ಅಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎನ್ನಲಾಗಿದೆ.
1934 ಫೆಬ್ರವರಿ 15 ರಂದು ಮೈಸೂರಿನಲ್ಲಿ ಜನಿಸಿದ್ದ ಮಾಸ್ಟರ್ ಹಿರಣ್ಣಯ್ಯ ಮಾತಿನ ಮಲ್ಲ ಎಂದೇ ಚಿರಪರಿಚಿತರಾಗಿದ್ದರು. ವೃತ್ತಿ ರಂಗಭೂಮಿಯಲ್ಲಿ  ತಮ್ಮದೇ ಆದ ವಿಶಿಷ್ಠ ಛಾಪು ಮೂಡಿಸಿದ್ದರು. ಲಂಚಾವತರ ನಾಟಕದಲ್ಲಿನ ಅಭಿನಯ ಅವರಿಗೆ ಹೆಚ್ಚಿನ ಖ್ಯಾತಿ ತಂದುಕೊಟ್ಟಿತ್ತು.
ಮಾಸ್ಟರ್  ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ  ಹಸಿರಾಗಿ ಉಳಿಯುವಂತವು. ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ  ವೈಶಿಷ್ಟ್ಯವಾಗಿತ್ತು
ಕೇರ್ ಆಫ್ ಪುಟ್ ಪಾತ್, ನಂ.73 ಶಾಂತಿ ನಿವಾಸ, ಗಜ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದ ಅಭಿನಯಿಸಿದ್ದ ಮಾಸ್ಟರ್  ಹಿರಣ್ಣಯ್ಯ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ,ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com