ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ನಟಿ ನಯನತಾರಾ ನಿಶ್ಚಿತಾರ್ಥ?

ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ನಿರ್ದೇಶಕ ವಿಗ್ನೇಶ್ ಶಿವನ್ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ನಯನತಾರಾ
ನಯನತಾರಾ
Updated on: 
ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ನಿರ್ದೇಶಕ ವಿಗ್ನೇಶ್ ಶಿವನ್ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ನಯನತಾರಾ ತನ್ನ ಬಹುದಿನದ ಗೆಳೆಯ ನಿರ್ದೇಶಕ ವಿಗ್ನೇಶ್ ಶಿವನ್ ಜೊತೆ ಕೆಲವೇ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಅಲ್ಲದೆ 2020ರಲ್ಲಿ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಕಾಲಿವುಡ್ ನಲ್ಲಿ ಹರಿದಾಡುತ್ತಿದೆ.
ಇತ್ತೀಚೆಗೆ ನಯನತಾರಾ ಮತ್ತು ವಿಘ್ನೇಶ್ ಇಬ್ಬರು ಜೊತೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಇಬ್ಬರು ಹಾಲಿ ಡೇ ಟ್ರಿಪ್ ಸಹ ಎಂಜಾಯ್ ಮಾಡುತ್ತಿದ್ದಾರೆ.
ಇನ್ನು ನಯನತಾರಾ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ದರ್ಬಾರ್ ಚಿತ್ರ ಹಾಗೂ ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿ ಜೊತೆ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಈ ವಿಭಾಗದ ಇತರ ಸುದ್ದಿ

No stories found.

X
Kannada Prabha
www.kannadaprabha.com