ಹಲವು ಪ್ರತಿಭೆಗಳ ಸಂಗಮ ರವಿ ಬಸ್ರೂರು. ಸಿನಿಮಾ ನಿರ್ದೇಶಕ ಮತ್ತು ಸಂಗೀತ ರಚನೆಗಾರರಾಗಿರುವ ಅವರು ಗಿರ್ಮಿಟ್ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಇದು 5 ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿರುವ ರವಿ ಬಸ್ರೂರು ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳ ಡಬ್ಬಿಂಗ್ ನ್ನು ಕೂಡ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ತಮಿಳು ಮತ್ತು ಮಲಯಾಳಂ ಚಿತ್ರಗಳಿಗೆ ಪೊಡಿ ಮಾಸ್ ಎಂದು ಹೆಸರಿಡಲಾಗಿದ್ದು ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಪಕ್ಕಾ ಮಾಸ್ ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರದಲ್ಲಿ 280ಕ್ಕೂ ಹೆಚ್ಚು ಮಕ್ಕಳು ನಟಿಸಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್ ಚಿತ್ರ ಎನ್ನುತ್ತಾರೆ ರವಿ ಬಸ್ರೂರು.
ಐದೂ ಭಾಷೆಗಳಲ್ಲಿ ಚಿತ್ರದ ಡಬ್ಬಿಂಗ್ ಕೆಲಸ ನಡೆಯುತ್ತಿದ್ದು ಇನ್ನು ಒಂದು ವಾರದಲ್ಲಿ ಪೂರ್ಣಗೊಳ್ಳಲಿದೆ. ಈ ಮಧ್ಯೆ ನಾಳೆ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು ಅದರಲ್ಲಿ ಒಂದು ಹಾಡನ್ನು ಪುನೀತ್ ರಾಜ್ ಕುಮಾರ್ ಹಾಡಿದ್ದಾರೆ.