ಡಿಸೆಂಬರ್ 2ಕ್ಕೆ ಗಂಡುಗಲಿ ಮದಕರಿ ನಾಯಕ ಚಿತ್ರದ ಅದ್ಧೂರಿ ಮುಹೂರ್ತ!

ಪೌರಾಣಿಕ ಪಾತ್ರಗಳಲ್ಲಿ ಮಿಂಚಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮದಕರಿ ನಾಯಕ ಪಾತ್ರದಲ್ಲಿ ಮಿಂಚಲು ರೆಡಿಯಾಗಿದ್ದಾರೆ. 
ದರ್ಶನ್
ದರ್ಶನ್
Updated on

ಪೌರಾಣಿಕ ಪಾತ್ರಗಳಲ್ಲಿ ಮಿಂಚಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮದಕರಿ ನಾಯಕ ಪಾತ್ರದಲ್ಲಿ ಮಿಂಚಲು ರೆಡಿಯಾಗಿದ್ದಾರೆ. 

ಹೌದು ದರ್ಶನ್ ಅಭಿನಯದ ಗಂಡುಗಲಿ ಮದಕರಿ ನಾಯಕ ಚಿತ್ರದ ಮುಹೂರ್ತ ಮುಂದಿನ ಡಿಸೆಂಬರ್ 2ರಂದು ಅದ್ಧೂರಿಯಾಗಿ ನೆರವೇರಲಿದೆ. 

ಬಿಎಲ್ ವೇಣು ಅವರ ಗಂಡುಗಲಿ ಮದಕರಿ ನಾಯಕ ಕಾದಂಬರಿಯನ್ನೇ ಆದರಿಸಿ ಚಿತ್ರವನ್ನು ತೆರೆಗೆ ತರಲು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮುಂದಾಗಿದ್ದಾರೆ. ಇನ್ನು ಭಾರಿ ಬಜೆಟ್ ಚಿತ್ರಕ್ಕೆ ರಾಕಲೈನ್ ವೆಂಕಟೇಶ್ ಬಂಡವಾಳ ಹೂಡುತ್ತಿದ್ದಾರೆ. 

ದರ್ಶನ್ ಹುಟ್ಟಹಬ್ಬ ಫೆಬ್ರವರಿ 16ಕ್ಕೆ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. 

ಸದ್ಯ ದರ್ಶನ್ ಒಡೆಯ ಚಿತ್ರದ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ನಂತರ ತರುಣ್ ಸುಧೀರ್ ಅವರ ರಾಬರ್ಟ್ ಚಿತ್ರದಲ್ಲಿ ಬ್ಯುಸಿಯಾಗಿದ್ದು ತದ ನಂತರ ಮದಕರಿ ನಾಯಕ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com