ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ!

ಬಿಗ್  ಬಾಸ್ ವಿನ್ನರ್ , ರ‍್ಯಾಂಪ್ ಸಿಂಗರ್  ಚಂದನ್ ಶೆಟ್ಟಿ ,ನಿವೇದಿತಾ ಗೌಡಗೆ ಪ್ರಪೋಸ್ ಮಾಡಿದ್ದಾರೆ. ಯುವ ದಸರಾ ವೇದಿಕೆಯಲ್ಲಿ ಪ್ರೇಮ ನಿವೇದನೆ ಮಾಡಿಕೊಂಡ ಚಂದನ್ ಶೆಟ್ಟಿ, ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ನಿವೇದಿತಾ ಕೈಗೆ ಉಂಗುರು ತೊಡಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಚಂದನ್ ಶೆಟ್ಟಿ, ನಿವೇದಿತಾಗೌಡ
ಚಂದನ್ ಶೆಟ್ಟಿ, ನಿವೇದಿತಾಗೌಡ
Updated on

ಮೈಸೂರು: ಬಿಗ್  ಬಾಸ್  ವಿನ್ನರ್ , ರ‍್ಯಾಂಪ್ ಸಿಂಗರ್  ಚಂದನ್ ಶೆಟ್ಟಿ ,ನಿವೇದಿತಾ ಗೌಡಗೆ ಪ್ರಪೋಸ್ ಮಾಡಿದ್ದಾರೆ. ಯುವ ದಸರಾ ವೇದಿಕೆಯಲ್ಲಿ ಪ್ರೇಮ ನಿವೇದನೆ ಮಾಡಿಕೊಂಡ ಚಂದನ್ ಶೆಟ್ಟಿ, ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ನಿವೇದಿತಾ ಕೈಗೆ ಉಂಗುರು ತೊಡಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಟಿವಿ ಶೋನಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಭಾಗವಹಿಸಿದ್ದರು. 105 ದಿನಗಳಲ್ಲಿ ಅಲ್ಲಿಯೇ ಕಳೆದಿದ್ದರು.  ಇಬ್ಬರು ಜೊತೆಗಿರುವ ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು. ಇಬ್ಬರ ನಡುವಿನ ಸಂಬಂಧ ಬಗ್ಗೆ ಗಾಸಿಪ್ ಕೂಡಾ ಹುಟ್ಟಿಕೊಂಡಿತ್ತು. ಅದು ಇದೀಗ ಅಧಿಕೃತವಾಗಿದೆ. 

ಬಿಗ್ ಬಾಸ್ ಮನೆಯಲ್ಲಿ ನಮ್ಮಿಬ್ಬರ ನಡುವೆ ಸಾಕಷ್ಟು ಮಾತುಕತೆ ನಡೆದಿದೆ. 105 ದಿನಗಳಲ್ಲಿ  ಒಬ್ಬರನೊಬ್ಬರ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೇವೆ.  ವಿದೇಶದ ಯಾವುದಾದರೂ ಸುಂದರ ಸ್ಥಳದಲ್ಲಿ ಪ್ರಪೋಸ್ ಮಾಡಬೇಕೆಂದುಕೊಂಡಿದ್ದೆ. ಆದರೆ,  ನಾನು ಬೆಳೆದ ಮೈಸೂರಿನಲ್ಲಿ, ಅಭಿಮಾನಿಗಳ ಸಮ್ಮುಖದಲ್ಲಿ ಹೇಳುವುದು ಉತ್ತಮ ಎಂದು ದಸರಾ ಯುವ ವೇದಿಕೆಯಲ್ಲೇ ಪ್ರಪೋಸ್ ಮಾಡಿದೆ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.

ಮತ್ತೊಂದೆಡೆ ಸರ್ಕಾರಿ ಕಾರ್ಯಕ್ರಮದಲ್ಲಿ  ಚಂದನ್ ಶೆಟ್ಟಿ ಪ್ರೇಮ ನಿವೇದನೆ ಎಷ್ಟು ಸರಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com