ಮೋದಿಜೀ, ಉತ್ತರ ಭಾರತದ ನಟ ನಟಿಯರಿಗಿಂತ ನಾವು ಯಾವುದರಲ್ಲೂ ಕಮ್ಮಿ ಇಲ್ಲ: ಜಗ್ಗೇಶ್

ಪ್ರಧಾನಿ ನರೇಂದ್ರ ಮೋದಿ ಹಿಂದಿ ಚಿತ್ರರಂಗದ ಸೆಲೆಬ್ರಿಟಿಗಳನ್ನು ಮಾತ್ರ ಭೇಟಿಯಾಗಿದ್ದಾರೆ ಎಂದು ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರ ಸೊಸೆ ಉಪಸನಾ ಗರಂ ಆದ ಬೆನ್ನಲ್ಲೇ , ಕನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಕೂಡಾ ಇದೀಗ ಪ್ರಧಾನಿ ಮೋದಿಗೆ ನಯವಾಗಿಯೇ ಮಾತಿನ ಚಾಟಿ ಬೀಸಿದ್ದಾರೆ.
ಮೋದಿ, ಜಗ್ಗೇಶ್
ಮೋದಿ, ಜಗ್ಗೇಶ್
Updated on: 

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಿಂದಿ ಚಿತ್ರರಂಗದ ಸೆಲೆಬ್ರಿಟಿಗಳನ್ನು ಮಾತ್ರ ಭೇಟಿಯಾಗಿದ್ದಾರೆ ಎಂದು ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರ ಸೊಸೆ ಉಪಸನಾ ಗರಂ ಆದ ಬೆನ್ನಲ್ಲೇ , ಕನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಕೂಡಾ ಇದೀಗ ಪ್ರಧಾನಿ ಮೋದಿಗೆ ನಯವಾಗಿಯೇ ಮಾತಿನ ಚಾಟಿ ಬೀಸಿದ್ದಾರೆ.

ಕನ್ನಡಿಗರು ಇಂದು ಬಹುತೇಕ ಪರಭಾಷೆ ಸ್ಟಾರ್ಸ್ ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ!  ನರೇಂದ್ರ ಮೋದಿ ಜಿ , ಉತ್ತರ ಭಾರತದ ನಟ ನಟಿಯರಿಗಿಂತ ನಾವು ಯಾವುದರಲ್ಲೂ ಕಮ್ಮಿ ಇಲ್ಲಾ! ಶಾರೂಖ್ , ಅಮಿರ್ ಅಲ್ಲಾ ಕಲಾರಂಗಕ್ಕೆ ಒಡೆಯರು, ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ. ನಿಮ್ಮ ಭಾವನೆ ಗೌರವಿಸಲು , ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ಶನಿವಾರ ಚೇಂಜ್ ವಿಥಿನ್ ಹೆಸರಿನಲ್ಲಿ ಬಾಲಿವುಡ್ ಸೆಲೆಬ್ರಟಿಗಳನ್ನು ಭೇಟಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಶಾರುಖ್ ಖಾನ್, ಅಮೀರ್ ಖಾನ್, ಕಂಗನಾ ರಣಾವತ್, ಜಾಕ್ವೆಲಿನ್ ಫರ್ನಾಂಡೀಸ್ ಸೇರಿ ಹಲವು ಸಿನಿಮಾ ಹಾಗೂ ಕಿರು ತೆರೆಯ ಗಣ್ಯರು ಭಾಗವಹಿಸಿದ್ದರು. ಈ ವಿಷಯವನ್ನು ಪ್ರಧಾನಿ ಮೋದಿ ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com