‘ಕೃಷ್ಣ ಟಾಕೀಸ್’ನಲ್ಲಿ 'ನೈಟಿ ಮಾತ್ರ ಹಾಕೋಬೇಡ' ಐಟಂ ಸಾಂಗ್

ಗೋಕುಲ ಎಂಟರ್ ಟೈನರ್ ಲಾಂಛನದಲ್ಲಿ ಗೋವಿಂದರಾಜು ಎ ಎಚ್ ನಿರ್ಮಿಸುತ್ತಿರುವ, ಅಜಯ್ ರಾವ್ ನಾಯಕರಾಗಿ ನಟಿಸುತ್ತಿರುವ ‘ಕೃಷ್ಣ ಟಾಕೀಸ್' ಚಿತ್ರಕ್ಕಾಗಿ ಐಟಂ ಸಾಂಗ್ ನ ಚಿತ್ರೀಕರಣ ನಡೆಸಲಾಗಿದೆ.
ಚಿತ್ರದ ಪೋಸ್ಟರ್
ಚಿತ್ರದ ಪೋಸ್ಟರ್
Updated on

ಬೆಂಗಳೂರು: ಗೋಕುಲ ಎಂಟರ್ ಟೈನರ್ ಲಾಂಛನದಲ್ಲಿ ಗೋವಿಂದರಾಜು ಎ ಎಚ್ ನಿರ್ಮಿಸುತ್ತಿರುವ, ಅಜಯ್ ರಾವ್ ನಾಯಕರಾಗಿ ನಟಿಸುತ್ತಿರುವ ‘ಕೃಷ್ಣ ಟಾಕೀಸ್' ಚಿತ್ರಕ್ಕಾಗಿ ಐಟಂ ಸಾಂಗ್ ನ ಚಿತ್ರೀಕರಣ ನಡೆಸಲಾಗಿದೆ.

ಅಭಿಷೇಕ್ ಹಾಗೂ ಪ್ರಮೋದ್ ಮರವಂತೆ ಬರೆದಿರುವ ‘ನೈಟಿ ಮಾತ್ರ ಹಾಕೋಬೇಡ ಮೇನಕ. ನಮಗೆ ನೈಂಟಿ ಹೊಡದಂಗೆ ಆಗ್ತದೆ ಜೀವಕ್ಕೆ’ ಎಂಬ ಹಾಡಿನ ಚಿತ್ರೀಕರಣ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಹಾಕಲಾಗಿದ್ದ ಅದ್ದೂರಿ ಸೆಟ್‌ನಲ್ಲಿ ಮೂರು ದಿನಗಳ ಕಾಲ ನಡೆದಿದೆ.

ಭೂಷಣ್ ನೃತ್ಯ ನಿರ್ದೇಶನ ಮಾಡಿದ ಈ ಹಾಡಿನ ಚಿತ್ರೀಕರಣದಲ್ಲಿ ಅಜಯ್‌ರಾವ್, ಚಿಕ್ಕಣ್ಣ, ಲಾಸ್ಯ ನಾಗರಾಜ್ ಹಾಗೂ ಐವತ್ತಕ್ಕೂ ಹೆಚ್ಚು ಜನ ನೃತ್ಯ ಕಲಾವಿದರು ಅಭಿನಯಿಸಿದ್ದರು.

ವಿಜಯಾನಂದ್ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. ೨೦ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ೬೦ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ ಹಾಗೂ ೪೦ಕ್ಕೂ ಹೆಚ್ಚು ಚಿತ್ರಗಳಿಗೆ ಗೀತರಚನೆ ಮಾಡಿರುವ ಆನಂದ ಪ್ರಿಯ ಈ ಚಿತ್ರದ ಮೂಲಕ ತಮ್ಮ ಹೆಸರನ್ನು ವಿಜಯಾನಂದ್ ಎಂದು ಬದಲಾವಣೆ ಮಾಡಿಕೊಂಡಿದ್ದಾರೆ.

ಶ್ರೀಧರ್ ವಿ ಸಂಭ್ರಮ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಅಭಿಷೇಕ್ ಜಿ ಕಾಸರಗೋಡು ಅವರ ಛಾಯಾಗ್ರಹಣವಿದೆ. ಶ್ರೀಕಾಂತ್ ಸಂಕಲನ, ಮದನ್ - ಹರಿಣಿ, ಭೂಷಣ್ ನೃತ್ಯ ನಿರ್ದೇಶನ, ವಿಕ್ರಂ ಸಾಹಸ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಅಜಯ್ ರಾವ್, ಅಪೂರ್ವ, ಚಿಕ್ಕಣ್ಣ, ಸಿಂಧೂ ಲೋಕನಾಥ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು, ಶೋಭ್‌ರಾಜ್, ಮಂಡ್ಯ ರಮೇಶ್,  ನಿರಂತ್, ಯಶ್ ಶೆಟ್ಟಿ, ಉಮೇಶ್, ಶ್ರೀನಿವಾಸ ಪ್ರಭು, ಶಾಂಭವಿ, ಲಕ್ಷ್ಮೀಗೌಡ, ಯಮುನ, ಧರ್ಮೇಂದ್ರ ಅರಸ್ ಮುಂತಾದವರಿದ್ದಾರೆ. ಲಾಸ್ಯ ನಾಗರಾಜ್ ಅತಿಥಿಪಾತ್ರದಲ್ಲಿ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com