ಯಶ್ ಅಭಿಮಾನಿಗಳಿಗೆ ಡಬಲ್ ಧಮಾಕ; ನ.1ರಂದು ಕೆಜಿಎಫ್ 1 ರೀ ರಿಲೀಸ್!

ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲು ಸೃಷ್ಠಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 1 ಇದೇ ನವೆಂಬರ್ 1ರಂದು ಮರು ಬಿಡುಗಡೆಯಾಗುತ್ತಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲು ಸೃಷ್ಠಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 1 ಇದೇ ನವೆಂಬರ್ 1ರಂದು ಮರು ಬಿಡುಗಡೆಯಾಗುತ್ತಿದೆ. 

ಯಶ್ ಮತ್ತು ರಾಧಿಕಾ ದಂಪತಿ ಎರಡನೇ ಮಗುವಿನ ಖುಷಿಯಲ್ಲಿದ್ದರೆ ಅಭಿಮಾನಿಗಳಿಗೆ ಮಾತ್ರ ಡಬಲ್ ಧಮಾಕ ಎದುರಾಗಿದೆ. ಹೌದು 2018ರಲ್ಲಿ ಕೆಜಿಎಫ್ ಚಿತ್ರ ಬಿಡುಗಡೆಗೂ ಮುನ್ನ ಐರಾ ಹುಟ್ಟಿದ್ದು ಇದೀಗ ಮತ್ತೆ ಗಂಡು ಮಗು ಹುಟ್ಟಿನ ಖುಷಿಯಲ್ಲಿ ಮತ್ತೆ ಕೆಜಿಎಫ್ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. 

ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು ಇದೀಗ ಕೆಜಿಎಫ್ ಚಾಪ್ಟರ್ 2 ಚಿತ್ರದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಚಾಪ್ಟರ್ 2ನಲ್ಲಿ ಬಾಲಿವುಡ್ ನಟ ಸಂಜಯ್ ದತ್ ಮತ್ತು ರವೀನಾ ಟಂಡನ್ ನಟಿಸುತ್ತಿದ್ದಾರೆ. 

ಕೆಜಿಎಫ್ ಚಾಪ್ಟರ್ 1 ಚಿತ್ರ ಬರೋಬ್ಬರಿ 243 ಕೋಟಿ ರುಪಾಯಿ ಕಲೆಕ್ಷನ್ ಮಾಡಿ ಕನ್ನಡದ ಅತೀ ಹೆಚ್ಚು ಗಳಿಕೆ ಮಾಡಿದ ಸಾಧನೆ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com