ಕೆಜಿಎಫ್ 2 ಸೆಟ್ಗೆ ಎಂಟ್ರಿ ಕೊಟ್ಟ ಬಾಲಿವುಡ್ ನಟ ಸಂಜಯ್ ದತ್!

ಕನ್ನಡ ಚಿತ್ರರಂಗದ ದಿಕ್ಕು ದೆಸೆ ಬದಲಿಸಿದ ಕೆಜಿಎಫ್ ಚಿತ್ರದ ಮುಂದುವರೆದ ಭಾಗ ಕೆಜಿಎಫ್ ಚಾಪ್ಟರ್ 2 ನಲ್ಲಿ ಬಾಲಿವುಡ್ ನಟ ಸಂಜಯ್ ದತ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದು ಚಿತ್ರೀಕರಣ ಸೆಟ್ ಗೆ ಎಂಟ್ರಿ ಕೊಟ್ಟಿದ್ದಾರೆ.
ಪ್ರಶಾಂತ್ ನೀಲ್-ಸಂಜಯ್ ದತ್
ಪ್ರಶಾಂತ್ ನೀಲ್-ಸಂಜಯ್ ದತ್
Updated on

ಕನ್ನಡ ಚಿತ್ರರಂಗದ ದಿಕ್ಕು ದೆಸೆ ಬದಲಿಸಿದ ಕೆಜಿಎಫ್ ಚಿತ್ರದ ಮುಂದುವರೆದ ಭಾಗ ಕೆಜಿಎಫ್ ಚಾಪ್ಟರ್ 2 ನಲ್ಲಿ ಬಾಲಿವುಡ್ ನಟ ಸಂಜಯ್ ದತ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದು ಚಿತ್ರೀಕರಣ ಸೆಟ್ ಗೆ ಎಂಟ್ರಿ ಕೊಟ್ಟಿದ್ದಾರೆ.

ಸಂಜಯ್ ದತ್ ಚಿತ್ರೀಕರಣದ ಸೆಟ್ ಗೆ ಎಂಟ್ರಿಕೊಟ್ಟಿದ್ದ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಕಾರ್ಯಕಾರಿ ನಿರ್ಮಾಪಕ ಕಾರ್ತಿ ಗೌಡ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋವನ್ನು ಪ್ರಶಾಂತ್ ನೀಲ್ ಟ್ವೀಟರ್ ನಲ್ಲಿ ಶೇರ್ ಮಾಡಿದ್ದಾರೆ.

ಅಧೀರಾ ಪಾತ್ರದ ಕುರಿತಂತೆ ಸಂಜಯ್ ದತ್ ಹೇಳಿದ್ದೇನು?
 2012ರಲ್ಲಿ ನಾನು ನಟಿಸಿದ್ದ ಅಗ್ನೀಪತ್ ಚಿತ್ರ ತೆರೆಕಂಡಿತ್ತು. ಈ ಚಿತ್ರದಲ್ಲಿ ನೆಗೆಟಿವ್ ಶೇಡ್ ನಲ್ಲಿ ಕಾಣಿಸಿಕೊಂಡಿದ್ದೇ. ಈಗ ಮತ್ತದೇ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಖುಷಿಯಾಗಿದೆ. ಅಗ್ನೀಪತ್ ಚಿತ್ರದ ನಂತರ ನನಗೆ ಸಿಕ್ಕ ಶ್ರೇಷ್ಠ ವಿಲನ್ ಪಾತ್ರ ಇದು ಎಂದು ಸಂಜಯ್ ದತ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಕೆಜಿಎಫ್ ಚಾಪ್ಟರ್ 1 ಚಿತ್ರ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿ ದೇಶಾದ್ಯಂತ ಬರೋಬ್ಬರಿ 243 ಕೋಟಿ ರುಪಾಯಿಯನ್ನು ಗಳಿಸಿ ಕನ್ನಡದ ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆ ಬರೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com