'ಪೈಲ್ವಾನ್ 'ಚಿತ್ರದ ಆಡಿಯೊ ಬಿಡುಗಡೆಗೆ ಮುಹೂರ್ತ ಫಿಕ್ಸ್ : ಆ. 9 ರಂದು ಚಿತ್ರದುರ್ಗದಲ್ಲಿ ಸಮಾರಂಭ

ಕಿಚ್ಚ ಸುದೀಪ್ ಹಾಗೂ ಸುನೀಲ್ ಶೆಟ್ಟಿ ಅಭಿನಯದ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ 'ಪೈಲ್ವಾನ್ 'ಚಿತ್ರದ ಆಡಿಯೊ ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

Published: 02nd August 2019 12:00 PM  |   Last Updated: 02nd August 2019 10:07 AM   |  A+A-


Pailwaan

ಪೈಲ್ವಾನ್

Posted By : ABN ABN
Source : Online Desk
ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಸುನೀಲ್ ಶೆಟ್ಟಿ ಅಭಿನಯದ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ 'ಪೈಲ್ವಾನ್ 'ಚಿತ್ರದ ಆಡಿಯೊ ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. 

ಆಗಸ್ಟ್ 9 ರಂದು ಚಿತ್ರದುರ್ಗದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.  ಸೆಪ್ಟೆಂಬರ್  12 ರಂದು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು, ಮತ್ತು ಮಲಯಾಳಂ ಭಾಷೆಯಲ್ಲಿ ಸಿನಿಮಾ ತೆರೆಗೆ ಅಪ್ಪಳಿಸಿದೆ.

ಆಡಿಯೊ ಬಿಡುಗಡೆಯ ಕ್ಷಣಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಜುಲೈ 27 ರಂದೇ ಆಡಿಯೋ ಬಿಡುಗಡೆಯಾಗಬೇಕಿತ್ತು. ಆದರೆ, ತಾಂತ್ರಿಕ ಕಾರಣದ ಹಿನ್ನೆಲೆಯಲ್ಲಿ ಆಡಿಯೋ ಬಿಡುಗಡೆಗೆ ವಿಳಂಬವಾಗುತ್ತಿದೆ ಎಂದು ಚಿತ್ರತಂಡ ಹೇಳಿದೆ. 

ಚಿತ್ರದಲ್ಲಿ ಆರು ಹಾಡುಗಳು ಮತ್ತು ಎರಡು ಥೀಮ್ ಸಾಂಗ್ ಗಳಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.  ಕೃಷ್ಣ ನಿರ್ದೇಶದ ಈ ಚಿತ್ರದಲ್ಲಿ ಆಕಾಂಕ್ಷಾ ಸಿಂಗ್ ನಾಯಕಿಯಾಗಿದ್ದು, ಬಾಲಿವುಡ್ ನಟ ಸುನೀಲ್ ಶೆಟ್ಟಿ, ಕಬೀನ್ ದುಹಾನ್ ಸಿಂಗ್, ಶರತ್ ಲೋಹಿತಾಶ್ವ ಮತ್ತಿತರರ ತಾರಾಗಣವಿದೆ. 


Stay up to date on all the latest ಸಿನಿಮಾ ಸುದ್ದಿ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp