ಕಿಸ್ ಸಿನಿಮಾಗೆ ಧ್ರುವ ಸರ್ಜಾ ಹಿನ್ನೆಲೆ ಧ್ವನಿ

ನಿರ್ದೇಶಕ ಎ ಪಿ ಅರ್ಜುನ್ ಮತ್ತು ಧ್ರುವ ಸರ್ಜಾ ನಡುವೆ ಉತ್ತಮ ಬಾಂಧವ್ಯವಿದೆ. ಧ್ರುವ ಸರ್ಜಾ ಮೊದಲ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದೆ ಎಪಿ ಅರ್ಜುನ್. ಈ ಮೂಲಕ ಧ್ರುವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು ಅರ್ಜುನ್ ಎರಡು ಸೂಪರ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಸಕ್ಸಸ್ ಫುಲ್ ಜೋಡಿ ಎನಿಸಿಕೊಂಡಿದ್ದಾರೆ.
ಕಿಸ್ ಸಿನಿಮಾ  ಪೋಸ್ಟರ್

ಈಗ ನಿರ್ದೇಶಕ ಎ ಪಿ ಅರ್ಜುನ್ 'ಕಿಸ್'ಗೆ ನಟ ಧ್ರುವ ಸರ್ಜಾ ಸಾಥ್ ನೀಡಿದ್ದಾರೆ. ಹೌದು ಅರ್ಜುನ್ ನಿರ್ದೇಶನದ ಕಿಸ್ ಚಿತ್ರಕ್ಕೆ ನಟ ಧ್ರುವ ಸರ್ಜಾ ಹಿನ್ನಲೆ ಧ್ವನಿ ನೀಡಿದ್ದಾರೆ. 'ಕಿಸ್' ಸಿನಿಮಾ ಸೆಟ್ಟೇರಿ ವರ್ಷದ ಮೇಲಾಗಿದೆ. ಚಿತ್ರಾಭಿಮಾನಿಗಳು ಯಾವಾಗ ತೆರೆಗೆ ಬರುತ್ತೆ ಅಂತ ಕಾತುರದಿಂದ ಕಾಯುತ್ತಿದ್ದಾರೆ. ಅಲ್ಲದೆ ಚಿತ್ರದ ಹಾಡುಗಳು ನಿರೀಕ್ಷೆ ಮಟ್ಟವನ್ನು ಮತ್ತಷ್ಟು ಹೆಚ್ಚಿದೆ.

ಅಂದ್ಹಾಗೆ ಚಿತ್ರದಲ್ಲಿ ವಿರಾಟ್ ಮತ್ತು ಶ್ರೀಲೀಲಾ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಒಂದು ಹಾಡಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಧ್ವನಿ ನೀಡಿದ್ದಾರೆ. ಈಗ ಧ್ರುವ ಸರ್ಜಾ ಜೊತೆಯಾಗಿರುವುದು 'ಕಿಸ್'ಗೆ ಮತ್ತಷ್ಟು ಬಲ ಬಂದಿದೆ.

'ಕಿಸ್' ಹೆಸರೇ ಹೇಳುವ ಹಾಗೆ ಇದೊಂದು ರೋಮ್ಯಾಂಟಿಕ್ ಸಿನಿಮಾ. ಚಿತ್ರಕ್ಕೆ 'ತುಂಟ ತುಟಿಗಳ ಆಟೋಗ್ರಾಫ್' ಎನ್ನುವ ಟ್ಯಾಗ್ ಲೈನ್ ಕೂಡ ಇದೆ. ಕಿಸ್ ಸಿನಿಮಾ ಸೆಪ್ಟಂಬರ್ 27 ರಂದು  ರಿಲೀಸ್ ಆಗಲಿದೆ, ದತ್ತಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ,  ಕಿಸ್ ಸಿನಿಮಾಗೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com