ಏಪ್ರಿಲ್ 2020 ಕ್ಕೆ ಭಜರಂಗಿ-2 ರಿಲೀಸ್: ನಿರ್ದೇಶಕ ಹರ್ಷ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಸಿನಿಮಾ 2020ರ ಏಪ್ರಿಲ್ ತಿಂಗಳಿನಲ್ಲಿ ರಿಲೀಸ್ ಆಗುವ ಸಾಧ್ಯತೆಯಿದೆ.  ಬೇಸಿಗೆ ರಜೆಯನ್ನು ಗಮನದಲ್ಲಿರಿಸಿಕೊಂಡು ಸಿನಿಮಾ ರಿಲೀಸ್ ಗೆ ಪ್ಲಾನ್ ಮಾಡಲಾಗುತ್ತಿದೆ

Published: 02nd December 2019 01:20 PM  |   Last Updated: 02nd December 2019 01:27 PM   |  A+A-


Shiva rajkumar

ಶಿ್ವರಾಜ್ ಕುಮಾರ್

Posted By : Shilpa D
Source : The New Indian Express

ಬೆಂಗಳೂರು:   ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಸಿನಿಮಾ 2020ರ ಏಪ್ರಿಲ್ ತಿಂಗಳಿನಲ್ಲಿ ರಿಲೀಸ್ ಆಗುವ ಸಾಧ್ಯತೆಯಿದೆ.  ಬೇಸಿಗೆ ರಜೆಯನ್ನು ಗಮನದಲ್ಲಿರಿಸಿಕೊಂಡು ಸಿನಿಮಾ ರಿಲೀಸ್ ಗೆ ಪ್ಲಾನ್ ಮಾಡಲಾಗುತ್ತಿದೆ.

ಭುಜದ ಶಸ್ತ್ರ ಚಿಕಿತ್ಸೆ ನಂತರ ಶಿವಣ್ಣ ಗುಣಮುಖರಾಗುತ್ತಿದ್ದು, ಭಜರಂಗಿ-2 ಸಿನಿಮಾ ಶೂಟಿಂಗ್ ನಡೆಯುತ್ತಿದೆ.  ಸದ್ಯ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಡಿಸೆಂಬರ್ 15ರೊಳಗೆ ಶೇ.70 ರಷ್ಟು ಶೂಟಿಂಗ್ ಪೂರ್ಣಗೊಳ್ಳಲಿದ್ದು, ಜನರವರಿ ತಿಂಗಳ ಅಂತ್ಯಕ್ಕೆ ಸಂಪೂರ್ಣ ಚಿತ್ರೀಕರಣ ಮುಗಿಯಲಿದೆ ಎಂದು ನಿರ್ದೇಶಕ ಹರ್ಷ ತಿಳಿಸಿದ್ದಾರೆ.

ಜಯಣ್ಣ ಕಂಬೈನ್ಸ್ ಮತ್ತು ಹರ್ಷ ಕಾಂಬಿನೇಷನ್ ನಲ್ಲಿ ಬರುತ್ತಿರುವ ಮೂರನೇ ಸಿನಿಮಾ ಇದಾಗಿದೆ,  ಟಗರು ನಂತರ ಭಾವನಾ ಮತ್ತು ಶಿವಣ್ಣ ಮತ್ತೊಮ್ಮೆ ನಟಿಸುತ್ತಿದ್ದಾರೆ.

ಹಿಂದಿನ ಭಜರಂಗಿ ಕಥೆಗೂ ಇದಕ್ಕೂ ಸಂಬಂಧವಿಲ್ಲ, ಇದರ ಕಥೆಯೇ ವಿಭಿನ್ನವಾಗಿದೆ ಎಂದು ಹರ್ಷ ತಿಳಿಸಿದ್ದಾರೆ.  ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news
Poll
Babri Masjid

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯ ಒದಗಿಸಲಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp