ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ' ಒಡೆಯ' ದರ್ಬಾರ್ : ದಾಸ ದರ್ಶನ್ ಮಾತು!

ಕಳೆದ ಗುರುವಾರ  ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ  ಒಡೆಯ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಉತ್ತಮ ಗಳಿಕೆ ಕಂಡಿರುವ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.
ದರ್ಶನ್
ದರ್ಶನ್

ಬೆಂಗಳೂರು: ಕಳೆದ ಗುರುವಾರ  ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ  ಒಡೆಯ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಉತ್ತಮ ಗಳಿಕೆ ಕಂಡಿರುವ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.

ಬಿಡುಗಡೆಯಾದ ಮೊದಲ ದಿನವೇ ರಾಜ್ಯಾದ್ಯಂತ  3 ಕೋಟಿ ಬಾಚಿಕೊಂಡಿರುವ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಶುಕ್ರವಾರ 1.40, ಶನಿವಾರ 2. 25 ಹಾಗೂ ಭಾನುವಾರ 2. 25 ಕೋಟಿ ಸೇರಿದಂತೆ ಒಟ್ಟು 7. 90 ಕೋಟಿ ಕಲೆಕ್ಷನ್ ಮಾಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಆದರೆ, ಚಿತ್ರ ತಂಡ ಆದರೆ, ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಚಿತ್ರತಂಡ ಹೇಳಿಕೊಂಡಿಲ್ಲ.

ಈ ವರ್ಷ ಬಿಡುಗಡೆಯಾದ ದರ್ಶನ್ ಅವರ ಯಜಮಾನ, ಕುರುಕ್ಷೇತ್ರಗಳು ಚಿತ್ರಗಳು ಕೂಡಾ ಗಲ್ಲಾ ಪೆಟ್ಟಿಗೆಯಲ್ಲಿ ಉತ್ತಮ ಗಳಿಕೆ ಕಂಡಿದ್ದು, ಒಡೆಯ ಕೂಡಾ ಬಾಕ್ಸ್ ಆಫೀಸ್ ಸುಲ್ತಾನನಿಗೆ ಹ್ಯಾಟ್ರಿಕ್ ಜಯ ತಂದುಕೊಡಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ ಅವರ ಅಭಿಮಾನಿಗಳು. 

ಇನ್ನೂ ಈ ಚಿತ್ರ ಯಶಸ್ವಿಯಾಗಿ ಮುನ್ನುಗ್ಗುತ್ತಿರುವಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ , ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com