ಧ್ರುವ ಸರ್ಜಾ
ಧ್ರುವ ಸರ್ಜಾ

ಇನ್‌ಸ್ಟಾಗ್ರಾಮ್ ಎಂಟ್ರಿ ಕೊಟ್ಟ ಧ್ರುವ ಸರ್ಜಾ, ಫಾಲೋ ಮಾಡಲು ಮುಗಿಬಿದ್ದ ಅಭಿಮಾನಿಗಳು!

ಅದ್ಧೂರಿ, ಬಹದ್ದೂರ್, ಭರ್ಜರಿ ಚಿತ್ರಗಳು ಮೂಲಕ ಸ್ಯಾಂಡಲ್ವುಡ್ ನಲ್ಲಿ ಸ್ಟಾರ್ ಪಟ್ಟ ಗಳಿಸಿಕೊಂಡಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಇದೀಗ ಸಾಮಾಜಿಕ...
ಬೆಂಗಳೂರು: ಅದ್ಧೂರಿ, ಬಹದ್ದೂರ್, ಭರ್ಜರಿ ಚಿತ್ರಗಳು ಮೂಲಕ ಸ್ಯಾಂಡಲ್ವುಡ್ ನಲ್ಲಿ ಸ್ಟಾರ್ ಪಟ್ಟ ಗಳಿಸಿಕೊಂಡಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಇದೀಗ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಗೆ ಎಂಟ್ರಿ ಕೊಟ್ಟಿದ್ದು ಒಂದೇ ದಿನಕ್ಕೆ ಲಕ್ಷಾಂತರ ಮಂದಿ ಫಾಲೋ ಮಾಡಲು ಶುರು ಮಾಡಿದ್ದಾರೆ.
ಟ್ವೀಟರ್ ಖಾತೆಯಲ್ಲಿ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದ ಧ್ರುವ ಸರ್ಜಾ ಇದೀಗ ಇನ್‌ಸ್ಟಾಗ್ರಾಮ್ ಗೆ ಕಾಲಿಟ್ಟಿದ್ದಾರೆ. ವಿಡಿಯೋ ಪೋಸ್ಟ್ ಮಾಡುವುದರ ಮೂಲಕ ತಮ್ಮ ಅಭಿಮಾನಿಗಳಿಗೆ ಈ ವಿಷಯವನ್ನು ತಿಳಿಸಿದ್ದಾರೆ. ಧ್ರುವ ಖಾತೆ ತೆರೆದ ಒಂದೇ ದಿನಕ್ಕೆ 1 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಫಾಲೋ ಮಾಡುತ್ತಿದ್ದಾರೆ.
ಸದ್ಯ ಪೊಗರು ಚಿತ್ರದಲ್ಲಿ ಧ್ರುವ ಸರ್ಜಾ ಅಭಿನಯಿಸಿದ್ದು ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ.

Related Stories

No stories found.

Advertisement

X
Kannada Prabha
www.kannadaprabha.com