ಸೈಲೆಂಟ್ ಆಗಿ ಮುಂದಕ್ಕೆ ಹೋದ 'ಪೈಲ್ವಾನ್'!

ಸ್ಯಾಂಡಲ್ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ.

Published: 23rd July 2019 12:00 PM  |   Last Updated: 23rd July 2019 12:28 PM   |  A+A-


Sudeep

ಸುದೀಪ್

Posted By : VS VS
Source : The New Indian Express
ಸ್ಯಾಂಡಲ್ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. 

ಚಿತ್ರತಂಡ ಮೊದಲಿಗೆ ಆಗಸ್ಟ್ 8ರಂದು ಬಿಡುಗಡೆಗೆ ಮುಂದಾಗಿತ್ತು. ಆದರೆ ಕಾರಣಾಂತರಗಳಿಂದ ಆಗಸ್ಟ್ 29ಕ್ಕೆ ಮುಂದೂಡಲಾಗಿತ್ತು. ಇದೀಗ ಈ ದಿನಾಂಕವೂ ಬದಲಾಗಿದ್ದು ಸೆಪ್ಟೆಂಬರ್ 12ಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ. 

ಜೂನ್ 22ರಂದು ಚಿತ್ರದುರ್ಗದಲ್ಲಿ ಆಡಿಯೋ ಬಿಡುಗಡೆಯಾಗಬೇಕಿತ್ತು. ಇದೀಗ ಈ ಕಾರ್ಯಕ್ರಮ ಸಹ ಮುಂದಕ್ಕೆ ಹೋಗಿದೆ. 

ಗಜಕೇಸರಿ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದ ಎಸ್ ಕೃಷ್ಣ ಅವರು ಇದೀಗ ಪೈಲ್ವಾನ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸುದೀಪ್ ಗೆ ಜೋಡಿಯಾಗಿ ಆಕಾಂಕ್ಷ ಸಿಂಗ್ ನಟಿಸಿದ್ದಾರೆ.
Stay up to date on all the latest ಸಿನಿಮಾ ಸುದ್ದಿ news
Poll
Covid-19_vaccine1

ಕೋವಿಡ್-19 ಲಸಿಕೆ ಅಂತಿಮವಾಗಿ ನಮಗೆ ಸಹಜ ಸ್ಥಿತಿಗೆ ಬರಲು ಸಹಾಯ ಮಾಡುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp