ತಮಿಳು ನಟ ವಿಜಯ್ ಸಾವಿನ ವದಂತಿ: ನೆಟ್ಟಿಗರ ವಿರುದ್ಧ ಕ್ರಿಕೆಟಿಗ ಆರ್ ಅಶ್ವಿನ್ ಆಕ್ರೋಶ

ಖ್ಯಾತ ತಮಿಳು ನಟ ವಿಜಯ್ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸಲು ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ನೆಟ್ಟಿಗರ...

Published: 30th July 2019 12:00 PM  |   Last Updated: 30th July 2019 03:51 AM   |  A+A-


Cricketer Ravichandran Ashwin slams netizens over 'Vijay death hoax'

ವಿಜಯ್ - ರವಿಚಂದ್ರನ್ ಅಶ್ವಿನ್

Posted By : LSB LSB
Source : IANS
ಚೆನ್ನೈ: ಖ್ಯಾತ ತಮಿಳು ನಟ ವಿಜಯ್ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸಲು ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ನೆಟ್ಟಿಗರ ವಿರುದ್ಧ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್‌ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸೋಮವಾರ ವಿಜಯ್ ಗೆ ಶ್ರದ್ಧಾಂಜಲಿ ಸಲ್ಲಿಸುವಂತೆ #RIPVijay ಮತ್ತು #RIPActorVijay ಎಂಬ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿತ್ತು. ಇದಕ್ಕೆ ತಮಿಳುನಾಡು ಮೂಲದ ಟೀಂ ಇಂಡಿಯಾ ಕ್ರಿಕೆಟಿಗ ಆರ್ ಅಶ್ವಿನ್ ಸೇರಿದಂತೆ ವಿಜಯ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೆಲ ದಿನಗಳ ಹಿಂದಷ್ಟೇ ಕ್ಷುದ್ರ ಗ್ರಹವೊಂದು ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇತ್ತು. ಇನ್ನು ವಿವಿಧ ನಗರಗಳಲ್ಲಿ ಮಳೆಯ ಕಾರಣ ಪ್ರವಾಹದ ಪರಿಸ್ಥಿತಿ ಇದೆ. ದೇಶದ ಅನೇಕ ಕಡೆಗಳಲ್ಲಿ ಬರಗಾಲವಿದೆ. ಇದರ ಬಗ್ಗೆ ಮಾತನಾಡುವುದು ಬಿಟ್ಟು ಕೆಲವರಿಗೆ ವಿಜಯ್ ರಿಪ್ ಎಂದು ಟ್ರೆಂಡ್ ಮಾಡುವುದರಲ್ಲೇ ಆಸಕ್ತಿ ಹೆಚ್ಚಿದಂತಿದೆ ಎಂದು ಅಶ್ವಿನ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಇಂತಹ ಸುದ್ದಿಗಳನ್ನು ಟ್ರೆಂಡ್ ಮಾಡುವುದನ್ನು ಮೊದಲು ನಿಲ್ಲಿಸಿ ಎಂದು ಕಿಡಿ ಕಾರಿದ್ದಾರೆ.
Stay up to date on all the latest ಸಿನಿಮಾ ಸುದ್ದಿ news
Poll

ಎನ್‌ಡಿಎ ಆಡಳಿತದಲ್ಲಿ ಭಯೋತ್ಪಾದಕ ದಾಳಿಯಿಂದ ಭಾರತ ಸುರಕ್ಷಿತವಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp