ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಿಸಿ, ಸ್ವತಃ ಶೂ ತೊಡಿಸಿದ ಕಿಚ್ಚ ಸುದೀಪ್: ವಿಡಿಯೋ ವೈರಲ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಶುಕ್ರವಾರ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಮಾಡಿ, ಸ್ವತಃ ವಿದ್ಯಾರ್ಥಿಯೊಬ್ಬನ...

Published: 07th June 2019 12:00 PM  |   Last Updated: 07th June 2019 08:35 AM   |  A+A-


Kichcha Sudeep distributes shoes for government school students

ಕಿಚ್ಚ ಸುದೀಪ್

Posted By : LSB LSB
Source : Online Desk
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಶುಕ್ರವಾರ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಮಾಡಿ, ಸ್ವತಃ ವಿದ್ಯಾರ್ಥಿಯೊಬ್ಬನ ಕಾಲಿಗೆ ಶೂ ತೊಡಿಸಿದ್ದು, ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ.

ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು, ಪ್ರತಿ ವಿದ್ಯಾರ್ಥಿಗೂ ತಾವೇ ಶೂ ವಿತರಿಸಿದರು. ಅಲ್ಲದೆ ವಿದ್ಯಾರ್ಥಿಯೊಬ್ಬನಿಗೆ ಸ್ವತಃ ತಾವೇ ಶೂ ತೊಡಿಸಿದ್ದು ವಿಶೇಷವಾಗಿತ್ತು. ಈ ವಿಶೇಷ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳ ಪರ ನಾವಿದ್ದೇವೆ ಎಂಬ ಧನಾತ್ಮಕ ಸಂದೇಶವನ್ನು ಸುದೀಪ್​ ರವಾನಿಸಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ನೆರವಾದ ಸುದೀಪ್​ ಅವರ ಈ ಕಾರ್ಯಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಕಾರ್ಯಕ್ರಮದ ವಿಡಿಯೋ ವೈರಲ್ ಆಗಿದೆ.
Stay up to date on all the latest ಸಿನಿಮಾ ಸುದ್ದಿ news with The Kannadaprabha App. Download now
facebook twitter whatsapp