ಬರಿಗಾಲಲ್ಲಿ ಸಾವಿರ ಮೆಟ್ಟಿಲು ಹತ್ತಿ ಚಾಮುಂಡೇಶ್ವರಿ ದರ್ಶನ ಪಡೆದ ಪುನೀತ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. 1001ಮೆಟ್ಟಿಲು ಹತ್ತಿ ದೇವಿ ದರ್ಶನ ಪಡೆದಿದ್ದಾರೆ.
ಪುನೀತ್ ರಾಜ್ ಕುಮಾರ್
ಪುನೀತ್ ರಾಜ್ ಕುಮಾರ್
ಮೈಸೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. 1001ಮೆಟ್ಟಿಲು ಹತ್ತಿ  ದೇವಿ ದರ್ಶನ ಪಡೆದಿದ್ದಾರೆ.
ಪುನೀತ್ ರಾಜ್ ಕುಮಾರ ಬರಿಗಾಲಲ್ಲಿ ಚಾಮುಂಡಿ ಬೆಟ್ಟದ ಸಾವಿರ ಮೆಟ್ಟಿಲು ಹತ್ತಿದ್ದು, ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಾಸ್ಥಾನಕ್ಕೆ ಪುನೀತ್ ರಾಜ್​ಕುಮಾರ್​ ಅವರ ದಿಢೀರ್ ಭೇಟಿ ಕಂಡು ಅಭಿಮಾನಿಗಳು ತುಂಬಾ ಖುಷಿ ಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಬೆಟ್ಟ ಹತ್ತಿ ಇಳಿಯುವವರೆಗೂ ಜೊತೆಯಲ್ಲಿ ಸಾಥ್ ನೀಡಿದ್ದಾರೆ.
ಪ್ರತಿ ಬಾರಿ ಪುನೀತ್ ರಾಜ್‍ಕುಮಾರ್ ಬೆಟ್ಟ ಏರಿ ದೇವಿಯ ದರ್ಶನ ಪಡೆಯುತ್ತಿದ್ದರು. ಹಾಗೆಯೇ ಇಂದು ಕೂಡ ಪುನೀತ್ ತಮ್ಮ ಆಪ್ತರೊಂದಿಗೆ ಬೆಟ್ಟದ 1000 ಮೆಟ್ಟಿಲು ಏರಿ ಚಾಮುಂಡಿ ದರ್ಶನ ಪಡೆದಿದ್ದಾರೆ.ಈ ವೇಳೆ ಪುನೀತ್ ಟಿ-ಶರ್ಟ್ ಕ್ಯಾಪ್ ಧರಿಸಿ ಸಾಮಾನ್ಯರಂತೆ ಬೆಟ್ಟ ಏರಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com