ಪ್ರಸಿದ್ಧ ನಿರ್ದೇಶಕ ಮಣಿರತ್ನಂ ಅಪೋಲೋ ಆಸ್ಪತ್ರೆಗೆ ದಾಖಲು

ಭಾರತೀಯ ಸಿನಿಮಾರಂಗದ ಪ್ರಸಿದ್ದ ಹಿರಿಯ ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ ಮಣಿರತ್ನಂ ಮುಂಬೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ...

Published: 17th June 2019 12:00 PM  |   Last Updated: 17th June 2019 02:25 AM   |  A+A-


Mani Ratnam

ಮಣಿರತ್ನಂ

Posted By : SD SD
Source : Online Desk
ಮುಂಬಯಿ: ಭಾರತೀಯ ಸಿನಿಮಾರಂಗದ ಪ್ರಸಿದ್ದ ಹಿರಿಯ ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ ಮಣಿರತ್ನಂ ಮುಂಬೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದಾಗಲೇ ಮಣಿರತ್ನಂ ಅವರಿಗೆ  ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಮುಂಬೈನಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಅಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಹೇಳಲಾಗಿದೆ,

ನಿರ್ದೇಶಕ ಮಣಿರತ್ನಂ ಅವರ ಅನಾರೋಗ್ಯ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ,  ಭಾರತೀಯ ಸಿನಿಮಾರಂಗದಲ್ಲಿ ಹೆಸರುವಾಸಿಯಾದ ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ ಮಣಿರತ್ನಂ(63) ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಮುಂಬೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದಾಗಲೇ ಮಣಿರತ್ನಂ ಅವರಿಗೆ ಹೃದಯದ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಮುಂಬೈನಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಅಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಇನ್ನೂ ಮಣಿರತ್ನಂ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಆಸ್ಪತ್ರೆ ವೈದ್ಯರು, ಅವರು ಹೃದಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಲಿಲ್ಲ, ಗ್ಯಾಸ್ ಟ್ರಬಲ್ ನಿಂದಾಗಿ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿಸಿದೆ,  ನಿರ್ದೇಶಕ ಮಣಿರತ್ನಂ ಅವರ ಅನಾರೋಗ್ಯ ಕುರಿತಾಗಿ ಸಾಮಾಜಿಕ ಜಾಲತಾಣಗಲ್ಲಿ ತಿಳಿಸಲಾಗಿದೆ. 
Stay up to date on all the latest ಸಿನಿಮಾ ಸುದ್ದಿ news with The Kannadaprabha App. Download now
facebook twitter whatsapp