ಕೊಡಗು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ: ಮುಖ್ಯಮಂತ್ರಿಗೆ ಸುದೀಪ್ ಮನವಿ

ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಎಂದು ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ.

Published: 18th June 2019 12:00 PM  |   Last Updated: 19th June 2019 12:08 PM   |  A+A-


Sudeep

ಸುದೀಪ್

Posted By : ABN ABN
Source : Online Desk
ಬೆಂಗಳೂರು: ಪ್ರಾಕೃತಿಕ ವೈವಿಧ್ಯಮಯ ತಾಣವಾದ  ಉತ್ತರ ಕನ್ನಡ  ಹಾಗೂ ಕೊಡಗು ಜಿಲ್ಲೆಗಳಲ್ಲಿ  ಗಂಭೀರ ಸ್ವರೂಪದ ಕಾಯಿಲೆಗಳು ಹಾಗೂ ಅಪಘಾತಗಳ ಸಂದರ್ಭದಲ್ಲಿ ತಕ್ಷ ಣದ ಚಿಕಿತ್ಸೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ ಮಾಡಬೇಕು ಎಂಬ ಆಗ್ರಹದ ಅಭಿಯಾನ ಇದೀಗ ಪ್ರಾರಂಭಗೊಂಡಿದೆ. 

ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರಂಭವಾಗಿರುವ ಈ ಅಭಿಯಾನ ದಿನದಿಂದ ದಿನಕ್ಕೆ ವ್ಯಾಪಕತೆಯನ್ನು ಪಡೆದುಕೊಳ್ಳುತ್ತಿದೆ. ನೆಟ್ಟಿಗರು ಫೇಸ್ ಬುಕ್, ಟ್ವಿಟರ್, ವಾಟ್ಸಾಪ್ ಗಳನ್ನು ಬಳಕೆ ಮಾಡಿಕೊಳ್ಳುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸುತ್ತಿದ್ದಾರೆ.

ಈ ಅಭಿಯಾನಕ್ಕೆ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್, ರವಿಚಂದ್ರನ್ , ಪುನೀತ್ ರಾಜ್ ಕುಮಾರ್, ರಶ್ಮಿಕಾ ಮಂದಣ್ಣ , ಹರ್ಷಿಕಾ ಪೂಣಚ್ಚ ಹೀಗೆ ಹಲವಾರು ಸ್ಯಾಂಡಲ್ ವುಡಿನ ನಟ, ನಟಿಯರು ಬೆಂಬಲ ವ್ಯಕ್ತಪಡಿಸಿದ್ದರು. 

ಇದೀಗ ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಕೂಡಾ ಈ ಅಭಿಯಾನಕ್ಕೆ ಕೈ ಜೋಡಿಸಿದ್ದು, ಕೊಡಗು,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ. ಈ ವಿಚಾರದ ಬಗ್ಗೆ ಮುಖ್ಯಮಂತ್ರಿಗಳು ಗಮನ ಹರಿಸಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news with The Kannadaprabha App. Download now
facebook twitter whatsapp