ಐ ಲವ್ ಯೂ ಹೇಳಿ ತಪ್ಪು ಮಾಡಿಬಿಟ್ಟೆ ಎಂದು ಕಣ್ಣೀರಿಟ್ಟ ರಚಿತಾ ರಾಂ!

ಸ್ಯಾಂಡಲ್ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಂ ಅಭಿನಯದ ಐ ಲವ್ ಯೂ ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಇದರ ಬೆನ್ನಲ್ಲೇ ಇದೀಗ ರಚಿತಾ ರಾಂ...

Published: 22nd June 2019 12:00 PM  |   Last Updated: 24th June 2019 04:57 AM   |  A+A-


Rachita Ram

ರಚಿತಾ ರಾಂ

Posted By : VS VS
Source : Online Desk
ಸ್ಯಾಂಡಲ್ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಂ ಅಭಿನಯದ ಐ ಲವ್ ಯೂ ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಇದರ ಬೆನ್ನಲ್ಲೇ ಇದೀಗ ರಚಿತಾ ರಾಂ ಐ ಲವ್ ಯೂ ಅಂತ ಹೇಳಿ ತಪ್ಪು ಮಾಡಿಬಿಟ್ಟೆ ಕ್ಷಮಿಸು ಅಪ್ಪ ಎಂದು ಕಣ್ಣೀರು ಹಾಕಿರುವ ಘಟನೆ ನಡೆದಿದೆ.

ಮಾಧ್ಯಮವೊಂದರ ಸಂದರ್ಶನವೊಂದರಲ್ಲಿ ಮಾತನಾಡಿದ ರಚಿತಾ ರಾಂ, ಐ ಲವ್ ಯೂ ಚಿತ್ರದಲ್ಲಿ ನಾನು ಬೋಲ್ಡ್ ಆಗಿ ಕಾಣಿಸಿಕೊಂಡಿರುವುದು ನನ್ನ ತಂದೆಗೆ ಸಹಿಸಿಕೊಳ್ಳಲು ಸಾಧ್ಯವಾಗಿಲ್ಲ. ಅವರಿಗೆ ನಾನು ಕ್ಷಮಿಸಿ ಎಂದು ಹೇಳುವುದನ್ನು ಬಿಟ್ಟರೆ ಮತ್ತೇನು ಮಾಡಲು ಸಾಧ್ಯವಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ಆರ್ ಚಂದ್ರು ನಿರ್ದೇಶನದ ಐ ಲವ್ ಯೂ ಚಿತ್ರದ ಹಾಡೋಂದರಲ್ಲಿ ಉಪೇಂದ್ರ ಹಾಗೂ ರಚಿತಾ ರಾಂ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಈ ಹಾಡಿನ ಕುರಿತು ಉಪೇಂದ್ರ ಪತ್ನಿ ಪ್ರಿಯಾಂಕಾ ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. 
Stay up to date on all the latest ಸಿನಿಮಾ ಸುದ್ದಿ news with The Kannadaprabha App. Download now
facebook twitter whatsapp