ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಅಭಿನಯಿಸಿದ್ದ ಈ ನಟಿ, ಈಗ ಸಂಸದೆಯಾಗಿ ಸಂಸತ್ತಿಗೆ ಪ್ರವೇಶ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಾಯಕಿಯಾಗಿ ನಟಿಸಿದ್ದ ನಟಿಯೊಬ್ಬರು ಸಂಸದರಾಗಿ ಆಯ್ಕೆಯಾಗಿದ್ದಾರೆ....
ನವನೀತ್‌ ಕೌರ್‌
ನವನೀತ್‌ ಕೌರ್‌
ಮುಂಬಯಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಾಯಕಿಯಾಗಿ ನಟಿಸಿದ್ದ ನಟಿಯೊಬ್ಬರು ಸಂಸದರಾಗಿ ಆಯ್ಕೆಯಾಗಿದ್ದಾರೆ.
ದರ್ಶನ್ ನಟನೆಯ 'ದರ್ಶನ್‌' ಸಿನಿಮಾದಲ್ಲಿ ಅಭಿನಯಿಸಿದ್ದ ನವನೀತ್‌ ಕೌರ್‌ ರಾಣಾ ಇದೀಗ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಯುವ ಸ್ವಾಭಿಮಾನ ಪಕ್ಷದ ಅಭ್ಯರ್ಥಿಯಾಗಿ ಅಮರಾವತಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ನವನೀತ್‌ ಅಚ್ಚರಿಯ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ. ನವನೀತ್‌, 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶಿವಸೇನೆಯ ಆನಂದ್‌ರಾವ್‌ ಅವರನ್ನು 36000 ಮತಗಳಿಂದ ಸೋಲಿಸಿದ್ದಾರೆ.
ನವನೀತ್‌ ಅವರ ಪತಿ ರವಿ ರಾಣಾ ಅಮರಾವತಿ ಕ್ಷೇತ್ರದಲ್ಲಿ ವಿಧಾನಸಭಾ ಸದಸ್ಯರಾಗಿದ್ದಾರೆ. ಅವರೇ ಸ್ಥಾಪಿಸಿರುವ ಪಕ್ಷದಿಂದ ಕಳೆದ ಬಾರಿ ಕೂಡ ನವನೀತ್‌ ಸ್ಪರ್ಧಿಸಿದ್ದರಾದರೂ, 1.36 ಲಕ್ಷ ಮತಗಳ ಅಂತರದಿಂದ ಸೋತಿದ್ದರು. 
ಆದರೆ ಈ ಬಾರಿ ಕಾಂಗ್ರೆಸ್‌ ಮತ್ತು ಎನ್‌ಸಿಪಿಯ ಮೈತ್ರಿಕೂಟದ ಬೆಂಬಲದೊಂದಿಗೆ ನವನೀತ್‌ ಕಣಕ್ಕೆ ಇಳಿದು ಗೆಲುವು ಸಾಧಿಸಿದ್ದಾರೆ. ಕನ್ನಡ, ತೆಲುಗು, ತಮಿಳು ಭಾಷೆಯ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com