'ಕೆಜಿಎಫ್ ಚಾಪ್ಟರ್ 2' ತಂಡಕ್ಕೆ ಯಶ್ ಜೂನ್ 6ರಂದು ಸೇರ್ಪಡೆ

ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣ ಭರದಿಂದ ಸಾಗುತ್ತಿದೆ. ಮೇ ತಿಂಗಳಲ್ಲಿ ಮಧ್ಯ ಭಾಗದಲ್ಲಿ ...
ಯಶ್
ಯಶ್
ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣ ಭರದಿಂದ ಸಾಗುತ್ತಿದೆ. ಮೇ ತಿಂಗಳ ಮಧ್ಯ ಭಾಗದಲ್ಲಿ ಆರಂಭವಾದ ಚಿತ್ರೀಕರಣ ತಂಡಕ್ಕೆ ರಾಕಿಭಾಯ್ ಯಶ್ ಜೂನ್ 6ರಂದು ಮೈಸೂರಿನಲ್ಲಿ ಸೇರಿಕೊಳ್ಳಲಿದ್ದಾರೆ.
5 ಭಾಷೆಗಳಲ್ಲಿ ತೆರೆಕಂಡ ಕೆಜಿಎಫ್ ಚಾಪ್ಟರ್ 1 ಕಳೆದ ವರ್ಷ ಬ್ಲಾಕ್ ಬಸ್ಟರ್ ಸಿನಿಮಾ ಆಗಿತ್ತು. ಇದೀಗ ಚಾಪ್ಟರ್ 2 ಚಿತ್ರಕ್ಕಾಗಿ ಯಶ್ ಪ್ರೇಮಿಗಳು ಕಾಯುತ್ತಿದ್ದಾರೆ.
ಹೊಂಬಾಳೆ ಫಿಲ್ಮ್ಸ್ ನಡಿ ತಯಾರಾಗುತ್ತಿರುವ ಕೆಜಿಎಫ್ -2ನಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್ ಮತ್ತು ರವೀನಾ ಟೆಂಡನ್ ನಟಿಸುತ್ತಾರೆ ಎಂದು ಸುದ್ದಿಯಾಗಿತ್ತು. ಈ ಬಗ್ಗೆ ಚಿತ್ರತಂಡ ಇನ್ನೂ ಖಚಿತಪಡಿಸಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com