ನಾವು ಮೂವರಾಗಿದ್ದೇವೆ: ತಾಯಿಯಾದ ಮಜಾ ಟಾಕೀಸ್ 'ರಾಣಿ' ಶ್ವೇತಾ ಚಂಗಪ್ಪ

ಖಾಸಗಿ ಚಾನೆಲ್ ನಲ್ಲಿ ಪ್ರಸಾರವಾಗುವ ‘ಮಜಾ ಟಾಕೀಸ್’ ಕಾರ್ಯಕ್ರಮದ ರಾಣಿ ಖ್ಯಾತಿಯ ಶ್ವೇತಾ ಚಂಗಪ್ಪ ತಮ್ಮ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಂಡಿದ್ದಾರೆ.

Published: 10th September 2019 10:04 AM  |   Last Updated: 10th September 2019 10:06 AM   |  A+A-


Shwetha changappa

ಶ್ವೇತಾ ಚಂಗಪ್ಪ

Posted By : Shilpa D
Source : Online Desk

ಬೆಂಗಳೂರು: ಖಾಸಗಿ ಚಾನೆಲ್ ನಲ್ಲಿ ಪ್ರಸಾರವಾಗುವ ‘ಮಜಾ ಟಾಕೀಸ್’ ಕಾರ್ಯಕ್ರಮದ ರಾಣಿ ಖ್ಯಾತಿಯ ಶ್ವೇತಾ ಚಂಗಪ್ಪ ತಮ್ಮ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಂಡಿದ್ದಾರೆ.

ನಟಿ ಶ್ವೇತಾ ಚೆಂಗಪ್ಪ ಅವರು ಸೋಮವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತಮಗೆ ಮಗುವಾಗಿರುವ ಸಂತಸವನ್ನು ಶ್ವೇತಾ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಾವು ಈಗ ಮೂವರಾಗಿದ್ದೇವೆ. ನಮ್ಮ ತಾಯಿ, ತಂದೆ, ಕುಟುಂಬ, ಸ್ನೇಹಿತರು ಮತ್ತು ನಿಮ್ಮೆಲ್ಲರ ಶುಭಾಶಯ ಮತ್ತು ಪ್ರೀತಿಯಿಂದ ನಾನು ಹಾಗೂ ಕಿರಣ್ ನಮ್ಮ ಸಂತೋಷವನ್ನು ಸ್ವಾಗತಿಸಿದ್ದೇವೆ. ನಮಗೆ ಗಂಡು ಮಗುವಾಗಿದೆ” ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಆಸ್ಪತ್ರೆಯಲ್ಲಿ ಶ್ವೇತಾ ಮತ್ತು ಕಿರಣ್ ಇಬ್ಬರೂ ಮಗುವಿನ ಕೈ ಹಿಡಿದುಕೊಂಡಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

facebook twitter whatsapp