ರಿಷಬ್ ಶೆಟ್ಟಿ ರುದ್ರ ಪ್ರಯಾಗದಲ್ಲಿ ಬಾಲಿವುಡ್ ನಟ!  

ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ 'ರುದ್ರ ಪ್ರಯಾಗ' ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಾರಿ ನಿರೀಕ್ಷೆಯನ್ನು ಹುಟ್ಟು ಹಾಕುತ್ತಿದೆ.

Published: 17th September 2019 11:26 AM  |   Last Updated: 17th September 2019 11:28 AM   |  A+A-


Rishab Shetty

ರಿಷಭ್ ಶೆಟ್ಟಿ

Posted By : Shilpa D
Source : The New Indian Express

ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ 'ರುದ್ರ ಪ್ರಯಾಗ' ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಾರಿ ನಿರೀಕ್ಷೆಯನ್ನು ಹುಟ್ಟು ಹಾಕುತ್ತಿದೆ.

ಕಲಾವಿದರ ಆಯ್ಕೆ ವಿಚಾರದಲ್ಲಿ ಕುತೂಹಲ ಹೆಚ್ಚಿಸುತ್ತಿದೆ 'ರುದ್ರ ಪ್ರಯಾಗ'. ಮೊನ್ನೆ ಮೊನ್ನೆಯಷ್ಟೆ ಹಿರಿಯ ನಟ ಅನಂತ್ ನಾಗ್ ರಿಷಬ್ ಜೊತೆಯಾಗಿದ್ದಾರೆ.

ಇದರ ಬೆನ್ನಲ್ಲೆ ಈಗ ಮತ್ತಿಬ್ಬರು ಕಲಾವಿದರ ಹೆಸರು ಕೇಳಿ ಬರುತ್ತಿದೆ. ಹೌದು ಚಿತ್ರಕ್ಕೆ ನಾಯಕಿಯಾಗಿ ಶ್ರದ್ಧಾ ಶ್ರೀನಾಥ್ ಬಣ್ಣ ಹಚ್ಚಲಿದ್ದಾರೆ ಎಂದು ಹೇಳಲಾಗುತ್ತಿದೆ. 

ಟಾಲಿವುಡ್ ಮತ್ತು ಕಾಲಿವುಡ್ ನಲ್ಲಿ ಬ್ಯುಸಿ ಇರುವ ಶ್ರದ್ಧಾ ರುದ್ರ ಪ್ರಯಾಗದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಕಡೆ ಬರುತ್ತಿದ್ದಾರೆ. 

ಬಾಲಿವುಡ್ ನ ಖ್ಯಾತ ನಟ ರುದ್ರ ಪ್ರಯಾಗ ಸೇರಿಕೊಳ್ಳುವ ಸಾಧ್ಯತೆ ಇದೆ. ಬಾಲಿವುಡ್ ನಲ್ಲಿ ಮಿಂಚುತ್ತಿರುವ ಕನ್ನಡದ ನಟ ಗುಲ್ ಶನ್ ದೇವಯ್ಯ ನಾಯಕನಾಗಿ 

ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೆ ರಿಷಬ್, ಗುಲ್ ಶನ್ ಜೊತೆ ಮಾತುಕತೆ ನಡೆಸಿದ್ದಾರಂತೆ. ರಿಷಬ್ ಹೇಳಿದ 'ರುದ್ರ ಪ್ರಯಾಗ' ಕಥೆ ಕೇಳಿ ಗುಲ್ ಶನ್ ಸಖತ್ ಇಂಪ್ರೆಸ್ ಆಗಿದ್ದಾರಂತೆ. ಡೇಟ್ ಹೊಂದಾಣಿಕೆಯಾಗಿ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ರೆ, ಗುಲ್ ಶನ್ ಮೊದಲ ಬಾರಿಗೆ ಕನ್ನಡ ಚಿತ್ರ ಪ್ರೇಕ್ಷಕರ ಮುಂದೆ ಬರಲಿದ್ದಾರೆ. 
 

Stay up to date on all the latest ಸಿನಿಮಾ ಸುದ್ದಿ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp