ಕನ್ನಡದಲ್ಲಿ ಮೊದಲು ಸೆಟ್ಟೇರಿದ ವಾಕ್ಚಿತ್ರದ ನಟಿ ಎಸ್.ಕೆ. ಪದ್ಮಾದೇವಿ ಇನ್ನಿಲ್ಲ

ಕನ್ನಡದಲ್ಲಿ ಸೆಟ್ಟೇರಿದ ಮೊದಲ ವಾಕ್ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ `ಭಕ್ತಧ್ರುವ’(1934) ಚಿತ್ರದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಎಸ್ ಕೆ ಪದ್ಮಾದೇವಿ ನಿಧನರಾಗಿಅವರಿಗೆ 95 ವರ್ಷ ವಯಸ್ಸಾಗಿತ್ತು 
 

Published: 19th September 2019 01:47 PM  |   Last Updated: 19th September 2019 01:47 PM   |  A+A-


SK Padmadevi

ಪದ್ಮಾದೇವಿ

Posted By : Shilpa D
Source : UNI

ಬೆಂಗಳೂರು: ಕನ್ನಡದಲ್ಲಿ ಸೆಟ್ಟೇರಿದ ಮೊದಲ ವಾಕ್ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ `ಭಕ್ತಧ್ರುವ’(1934) ಚಿತ್ರದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಎಸ್ ಕೆ ಪದ್ಮಾದೇವಿ ನಿಧನರಾಗಿಅವರಿಗೆ 95 ವರ್ಷ ವಯಸ್ಸಾಗಿತ್ತು 
 
ಮೂಲತಃ ಬೆಂಗಳೂರಿನವರಾದ ಪದ್ಮಾದೇವಿ, ಬಳ್ಳಾರಿ ರಾಘವಾಚಾರ್ಯರ ಮೂಲಕ ರಂಗಭೂಮಿ ಪ್ರವೇಶಿಸಿದವರು ಹೆಚ್ ಎಲ್ ಎನ್ ಸಿಂಹ ಅವರ ನಾಟಕ ಕಂಪೆನಿಯಲ್ಲಿ ಅಭಿನಯಿಸುತ್ತಾ, ಬಳಿಕ ಸ್ವಂತ ನಾಟಕ ಸಂಸ್ಥೆಯನ್ನೂ ಕಟ್ಟಿದರು.
 
1936ರಲ್ಲಿ ತೆರೆಕಂಡ ‘ಸಂಸಾರನೌಕ’ ಹೆಸರು ತಂದು ಕೊಟ್ಟ ಚಿತ್ರ ಈ ಚಿತ್ರದಲ್ಲಿ ನಾಲ್ಕು ಹಾಡುಗಳನ್ನು ಹಾಡಿದ್ದು, ಒಂದು ಹಾಡನ್ನು ಸ್ವತಃ ಇವರೇ ವೀಣೆ ನುಡಿಸಿಕೊಂಡು ಹಾಡಿದ್ದು ವಿಶೇಷ.
 
‘ವಸಂತಸೇನ’, ‘ಭಕ್ತ ಸುಧಾಮ’, ‘ಜಾತಕ ಫಲ’ ಚಿತ್ರಗಳಲ್ಲಿಯೂ ಪದ್ಮಾದೇವಿ ನಟಿಸಿದ್ದಾರೆ ‘ಭಕ್ತಸುಧಾಮ’ದಲ್ಲಿ ಮಧುಗಿರಿ ಮೀನಾಕ್ಷಿ ಎಂದು ಹೆಸರು ಬದಲಾಯಿಸಿಕೊಂಡರು ಎರಡು ತೆಲುಗು ಚಿತ್ರಗಳಲ್ಲಿಯೂ ಅಭಿನಯಿಸಿದರು. 
 
ಆನಂತರ ರಂಗಭೂಮಿಯಲ್ಲೇ ತೊಡಗಿಸಿಕೊಂಡ ಕಾರಣ ಬಹಳ ಕಾಲ ಚಲನಚಿತ್ರದ ಅಭಿನಯ ನಿಲ್ಲಿಸಿದರು. ನಂತರ ‘ಮುಕ್ತಿ’, ‘ಅಮರ ಮಧುರ ಪ್ರೇಮ’, ‘ಸಂಕ್ರಾಂತಿ’ ಚಿತ್ರಗಳಲ್ಲಿ ಅಭಿನಯಿಸಿದರು.
 
ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ಕ್ರೌರ್ಯ’ ಚಿತ್ರದಲ್ಲಿ ರೇಣುಕಮ್ಮ ಮುರಗೊಡು ಅವರ ಪಾತ್ರಕ್ಕೆ ಕಂಠದಾನ ಮಾಡಿ ಪದ್ಮಾದೇವಿ, ಮಗ ನಂದಕಿಶೋರ್ ನಿರ್ದೇಶಿಸಿದ ‘ಕಿರಣ’ ಟೆಲಿ ಫಿಲಂನಲ್ಲಿ ಅಜ್ಜಿ ಪಾತ್ರ ಮಾಡಿದರು. ಆಕಾಶವಾಣಿಯಲ್ಲಿ ಅನೇಕ ವರ್ಷಗಳು ಕೆಲಸ ಮಾಡಿದ ಪದ್ಮಾದೇವಿಯವರು ಅಲ್ಲಿಯೂ ಜನಪ್ರಿಯತೆ ಗಳಿಸಿದರು.

Stay up to date on all the latest ಸಿನಿಮಾ ಸುದ್ದಿ news with The Kannadaprabha App. Download now
facebook twitter whatsapp