ಕೆಜಿಎಫ್-2 ಚಿತ್ರೀಕರಣ ಸ್ಥಗಿತ ಆದೇಶಕ್ಕೆ 'ಹೈ' ತಡೆಯಾಜ್ಞೆ

ಭಾರತ್ ಗೋಲ್ಟ್ ಮೈನ್ಸ್ ಲಿಮಿಟೆಡ್ (ಬಿಜಿಎಂಎಲ್) ಪ್ರದೇಶ ವ್ಯಾಪ್ತಿಯ ಸೈನೈಡ್ ಗುಡ್ಡದಲ್ಲಿ ಕೆಜಿಎಫ್-2 ಚಿತ್ರದ ಚಿತ್ರೀಕರಣ ನಡೆದಂತೆ ಕೋಲಾರದ ರಾಬರ್ಟ್ ಸನ್ ಪೇಟೆಯ ಜೆಎಂಎಫ್'ಸಿ ನ್ಯಾಯಾಲಯ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಭಾರತ್ ಗೋಲ್ಟ್ ಮೈನ್ಸ್ ಲಿಮಿಟೆಡ್ (ಬಿಜಿಎಂಎಲ್) ಪ್ರದೇಶ ವ್ಯಾಪ್ತಿಯ ಸೈನೈಡ್ ಗುಡ್ಡದಲ್ಲಿ ಕೆಜಿಎಫ್-2 ಚಿತ್ರದ ಚಿತ್ರೀಕರಣ ನಡೆದಂತೆ ಕೋಲಾರದ ರಾಬರ್ಟ್ ಸನ್ ಪೇಟೆಯ ಜೆಎಂಎಫ್'ಸಿ ನ್ಯಾಯಾಲಯ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. 

ಸೈನೈಡ್ ಗುಡ್ಡದಲ್ಲಿ ಕೆಜಿಎಫ್-2 ಚಿತ್ರದ ಚಿತ್ರೀಕರಣ ನಡೆಸದಂತೆ ಚಿತ್ರತಂಡಕ್ಕೆ ಸೂಚಿಸಿ ಅಧೀನ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಛಾಯಾಗ್ರಾಹಕ ಭುವನ್ ಹೈಕೋರ್ಟ್'ಗೆ ಅರ್ಜಿ ಸಲ್ಲಿಸಿದ್ದರು. 

ಗುರುವಾರ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯ ಮುಂದಿನ ವಿಚಾರಣೆವರೆಗೆ ಅಧೀನ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಜೊತೆಗೆ, ಈ ವಿಚಾರವಾಗಿ ಜೆಎಂಎಫ್'ಸಿ ಕೋರ್ಟ್ ನಲ್ಲಿ ಮೂಲ ದಾವೆ ಹೂಡಿದ್ದ ಎನ್.ಶ್ರೀನಿವಾಸ್'ಗೆ ತುರ್ತು ನೋಟಿಸ್ ಜಾರಿಗೊಳಿಸಿ, ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com