ಲಾಕ್ ಡೌನ್ ಉಲ್ಲಂಘನೆ: ನಿರೂಪಕ ಅಕುಲ್ ಬಾಲಾಜಿ ವಿರುದ್ಧ ಪ್ರಕರಣ

ಲಾಕ್‌ಡೌನ್ ನಡುವೆಯೇ  ರೆಸಾರ್ಟ್‌ನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಅನುವು ಮಾಡಿಕೊಟ್ಟ ಕಾರಣ ನಟ, ನಿರೂಪಕ ಅಕುಲ್ ಬಾಲಾಜಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಅಕುಲ್ ಬಾಲಾಜಿ
ಅಕುಲ್ ಬಾಲಾಜಿ
Updated on: 

ದೊಡ್ಡಬಳ್ಳಾಪುರ: ಲಾಕ್‌ಡೌನ್ ನಡುವೆಯೇ  ರೆಸಾರ್ಟ್‌ನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಅನುವು ಮಾಡಿಕೊಟ್ಟ ಕಾರಣ ನಟ, ನಿರೂಪಕ ಅಕುಲ್ ಬಾಲಾಜಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಲಾಕ್‌ಡೌನ್ ನಡುವೆ ಅಕುಲ್ ಬಾಲಾಜಿಗೆ ಸೇರಿದ ರೆಸಾರ್ಟ್‌ನಲ್ಲಿ ಮದುವೆ ಕಾರ್ಯಕ್ರಮಕ್ಕೆ ಸಿದ್ಧತೆ  ನಡೆಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಅಕುಲ್ ಒಡೆತನದ ಲಘುಮೇನಹಳ್ಳಿ ಬಳಿಯ ಸನ್‌ಶೈನ್ ರೆಸಾರ್ಟ್‌ ನಲ್ಲಿ ಏಪ್ರಿಲ್ 18ರಂದು ರಾತ್ರಿ  10.30ಕ್ಕೆ ಜನ ಸೇರಿದ್ದರು ಎನ್ನಲಾಗಿದ್ದು ಬೆಂಗಳೂರಿನಿಂದ 20ಕ್ಕೂ ಅಧಿಕ ಮಂದಿ ರೆಸಾರ್ಟ್‌ಗೆ ಬಂದು ಯಾವುದೇ ಅನುಮತಿ ಇಲ್ಲದೆ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com