ಜೀವ ರಕ್ಷಕ ಸಾಧನಗಳ ನೆರವಿನಲ್ಲಿ ಗಾಯಕ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿರ- ಹೆಲ್ತ್ ಬುಲೆಟಿನ್

 ಲಿಜೆಂಡರಿ ಗಾಯಕ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರನ್ನು ಜೀವ ರಕ್ಷಕ ಸಾಧನಗಳ ನೆರವಿನಲ್ಲಿ ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯ ಇತ್ತೀಚಿನ ಬುಲೆಟಿನ್ ನಲ್ಲಿ ಹೇಳಲಾಗಿದೆ.
ಗಾಯಕ ಎಸ್ ಬಿ ಬಾಲಸುಬ್ರಹ್ಮಣ್ಯಂ
ಗಾಯಕ ಎಸ್ ಬಿ ಬಾಲಸುಬ್ರಹ್ಮಣ್ಯಂ

ಬೆಂಗಳೂರು: ಲಿಜೆಂಡರಿ ಗಾಯಕ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರನ್ನು ಜೀವ ರಕ್ಷಕ ಸಾಧನಗಳ ನೆರವಿನಲ್ಲಿ ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯ ಇತ್ತೀಚಿನ ಬುಲೆಟಿನ್ ನಲ್ಲಿ ಹೇಳಲಾಗಿದೆ.

ಕೋವಿಡ್-19 ಕಾರಣದಿಂದಾಗಿ ಜೀವ ರಕ್ಷಕ ಸಾಧನಗಳ ನೆರವಿನೊಂದಿಗೆ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.ಬಾಲಸುಬ್ರಹ್ಮಣ್ಯಂ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೊರೋನಾವೈರಸ್ ದೃಢಪಟ್ಟ ನಂತರ ಆಗಸ್ಟ್ 5 ರಂದು ಎಸ್ .ಬಿ. ಬಾಲಸುಬ್ರಹ್ಮಣ್ಯಂ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ್ವರ ಸ್ವಲ್ಪ ಕಡಿಮೆಯಾಗಿದ್ದು, ಸದ್ಯದಲ್ಲಿಯೇ ಚೇತರಿಕೆಯಾಗುವುದಾಗಿ ಬಾಲಸುಬ್ರಹ್ಮಣ್ಯಂ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದರು.

ಆದಾಗ್ಯೂ, ಅಗಸ್ಟ್ 13 ರಂದು ಅವರ ಆರೋಗ್ಯ ಕ್ಷೀಣಿಸಿತ್ತು. ನಂತರ ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಸೆಲೆಬ್ರಿಟಿಗಳು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com