ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ಕುರಿತು ನಟ ಪ್ರಥಮ್ ಹಾಕಿದ್ದ ಪೋಸ್ಟ್ ಗೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ ಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ಆರೋಪಿಗಳ ಸಂಬಂಧಿ ಮಹಿಳೆಯೊಬ್ಬರು ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ತಮಗೆ 4 ತಿಂಗಳ ಮಗು ಹಾಗೂ 7 ತಿಂಗಳ ಮಗು ಇದೆ ಎಂದು ಹೇಳಿದ್ದರು. ಇದನ್ನು ವ್ಯಂಗ್ಯದ ಧಾಟಿಯಲ್ಲಿ ಪ್ರಥಮ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು.
ಈ ಸಂಬಂಧ ಎಸ್‌ಡಿಪಿಐ ಬೆಂಗಳೂರು ಜಿಲ್ಲಾ ಸಮಿತಿ ಸದಸ್ಯ ಉಮರ್ ಫಾರೂಕ್ ಹಲಸೂರು ಗೇಟ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇದರನ್ವಯ ಧಾರ್ಮಿಕ ಭಾವನೆಗೆ ಧಕ್ಕೆ ಸೇರಿದಂತೆ ಅನೇಕ ಪರಿಚ್ಚೇದಗಳಡಿ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಶೀಘ್ರವೇ ವಿಚಾರಣೆಗಾಗಿ ನಟ ಪ್ರಥಮ್ ಗೆ ನೋಟೀಸ್ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Advertisement