ಪ್ರಕಾಶ್ ರೈ
ಸಿನಿಮಾ ಸುದ್ದಿ
ಕೆಜಿಎಫ್-2 ಸಿನಿಮಾ ಪಾತ್ರಗಳಲ್ಲಿ ಬದಲಾವಣೆ: ಅನಂತ್ ನಾಗ್ ಪಾತ್ರಕ್ಕೆ ಪ್ರಕಾಶ್ ರಾಜ್
ಕೆಜಿಎಫ್ ಚಾಪ್ಟರ್ 2 ತಂಡ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಇದೀಗ ಮೊದಲ ದಿನದ ಶೂಟಿಂಗ್ನ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಕೆಜಿಎಫ್ ಚಾಪ್ಟರ್ 2 ತಂಡ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಇದೀಗ ಮೊದಲ ದಿನದ ಶೂಟಿಂಗ್ನ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಈ ಹಿಂದೆ ಆನಂದ್ ಇಂಗಳಗಿ ಪಾತ್ರದಲ್ಲಿ ಅನಂತ್ ನಾಗ್ ಕಾಣಿಸಿಕೊಂಡಿದ್ದರು. ರಾಕಿ ಭಾಯಿ ಕಥೆಯನ್ನು ನಿರೂಪಣೆ ಮಾಡಿದ್ದರು. ಜತೆಗೆ ಇತ್ತೀಚಿನ ದಿನಗಳಲ್ಲಿ ಕಾರಣಾಂತರಗಳಿಂದ ಅನಂತ್ನಾಗ್ ಕೆಜಿಎಫ್ ಸಿನಿಮಾದಿಂದ ಹೊರ ನಡೆದಿದ್ದರು ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಬಳಿಕ ಅವರ ಪಾತ್ರ ಯಾರು ಮಾಡಲಿದ್ದಾರೆ ಎಂಬ ಬಗ್ಗೆಯೂ ಚರ್ಚೆ ನಡೆದಿತ್ತು. ಇದೀಗ ಅದೆಲ್ಲದಕ್ಕೂ ಫೋಟೋ ಸಮೇತ ಉತ್ತರ ಸಿಕ್ಕಿದೆ.
ಮೊದಲ ಭಾಗದಲ್ಲಿ ಅನಂತ್ ನಾಗ್ ಮಾಡಿದ್ದ ಪಾತ್ರವನ್ನು ಚಾಪ್ಟರ್ 2ರಲ್ಲಿ ಪ್ರಕಾಶ್ ರೈ ಮಾಡಲಿದ್ದಾರೆ. ಈಗಾಗಲೇ ಮಿನರ್ವ ಮಿಲ್ನಲ್ಲಿ ಶೂಟಿಂಗ್ ಸಹ ಶುರುವಾಗಿದ್ದು, ರೈ ಮತ್ತು ಮಾಳವಿಕಾ ಅವಿನಾಶ್ ಸಹ ಪಾಲ್ಗೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ