13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವಕ್ಕೆ ಸಿಎಂ ಯಡಿಯೂರಪ್ಪ ಸಮ್ಮತಿ

ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣವನ್ನು ನಿರ್ಮಿಸಲಿದೆ.
ಸುನಿಲ್ ಪುರಾಣಿಕ್ - ಸಿಎಂ ಯಡಿಯೂರಪ್ಪ ಹಾಗೂ ಶೃತಿ
ಸುನಿಲ್ ಪುರಾಣಿಕ್ - ಸಿಎಂ ಯಡಿಯೂರಪ್ಪ ಹಾಗೂ ಶೃತಿ
Updated on

ಬೆಂಗಳೂರು: ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣವನ್ನು ನಿರ್ಮಿಸಲಿದೆ. ಆದಕಾರಣ, 2021ರ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ ಸಿನಿಮೋತ್ಸವವನ್ನು ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ಅವರ ನೇತೃತ್ವದ ನಿಯೋಗ ಮಾಡಿದ ಮನವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಂದಿಸಿದ್ದಾರೆ.

ಸುನಿಲ್ ಪುರಾಣಿಕ್ ನೇತೃತ್ವದ ನಿಯೋಗ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, 3ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕೋರಿದೆ.

ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ಸತತ ಕಳೆದ 12 ವರ್ಷಗಳ ಕಾಲ ಯಶಸ್ಸನ್ನು ಕಂಡಿದೆ. ವಿಶ್ವದಲ್ಲಿ 5000 ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಆದರೆ, ಅವುಗಳಲ್ಲಿ ಕೇವಲ 45 ಚಲನಚಿತ್ರೋತ್ಸವಗಳಿಗೆ ಅಂತರಾಷ್ಟ್ರೀಯ ಮಾನ್ಯತೆ ದೊರೆತಿದೆ. ಇದೀಗ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಅಂತರಾಷ್ಟ್ರೀಯ ಮಾನ್ಯತೆ ದೊರೆಯುವ ಲಕ್ಷಣಗಳು ಗೋಚರಿಸುತ್ತಿವೆ. ಒಂದು ವೇಳೆ ಮಾನ್ಯತೆ ದೊರೆತರೆ ಇದು ವಿಶ್ವದಲ್ಲಿ 46ನೇ ಮಾನ್ಯತೆ ಪಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತದೆ. ಆದ್ದರಿಂದ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವವನ್ನು ಆಯೋಜಿಸಲು ಸಮ್ಮತಿ ನೀಡುವಂತೆಯೂ ಹಾಗೂ ಅದಕ್ಕೆ ಅಗತ್ಯ ಅನುದಾನವನ್ನು ದೊರಕಿಸಿಕೊಡುವಂತೆಯೂ ನಿಯೋಗವು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.

ಭಾರತದಲ್ಲಿ ಕೇವಲ ನಾಲ್ಕು ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಗೋವಾದಲ್ಲಿ ಭಾರತ ಸರ್ಕಾರ ಚಲನಚಿತ್ರೋತ್ಸವವನ್ನು ಆಯೋಜಿಸುತ್ತದೆ. ಉಳಿದಂತೆ ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಕೇರಳ ರಾಜ್ಯ ಸರ್ಕಾರಗಳು ಚಲನನಚಿತ್ರೋತ್ಸವಗಳನ್ನು ಆಯೋಜಿಸುತ್ತಿವೆ ಎಂಬ ಅಂಶವನ್ನು ನಿಯೋಗವು ಮುಖ್ಯಮಂತ್ರಿಯವರ ಗಮನಕ್ಕೆ ತಂದಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com