ಬೆಂಗಳೂರು: ಸ್ಯಾಂಡಲ್ವುಡ್ನ ಮತ್ತೊಬ್ಬ ತಾರಾ ದಂಪತಿ ಸಂತಸದ ಸುದ್ದಿ ಹಂಚಿಕೊಂಡಿದ್ದಾರೆ. ಗೋವಿಂದಾಯ ನಮಃ, ಗೂಗ್ಲಿ ಮೊದಲಾದ ಚಿತ್ರಗಳ ನಿರ್ದೇಶಕ ಪವನ್ ಒಡೆಯರ್ ಅವರ ಪತ್ನಿ ನಟಿ ಅಪೇಕ್ಷಾ ಪುರೋಹಿತ್ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಖುಷಿಯ ವಿಚಾರವನ್ನು ನಿರ್ದೇಶಕ ಪವನ್ ಒಡೆಯರ್ ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಅಭಿಮಾನಿಗಳು, ಸ್ನೇಹಿತರು, ಬಂಧುಗಳು ಮತ್ತು ಹಿತೈಷಿಗಳಿಗಾಗಿ ಹಂಚಿಕೊಂಡಿದ್ದಾರೆ.
ಇಲ್ಲಿ ಮತ್ತೊಂದು ವಿಶೇಷ ಸಂಗತಿಯೆಂದರೆ ಪವನ್ ಒಡೆಯರ್ ಅವರ ಹುಟ್ಟುಹಬ್ಬದ ದಿನವೇ ಅವರಿಗೆ ಮಗ ಜನಿಸಿದ್ದು. ಬರ್ತ್ ಡೇ ದಿನವೇ ನನಗೆ ಅದ್ಭುತವಾದ ಉಡುಗೊರೆ ಸಿಕ್ಕಿದೆ ಎಂದು ನಿರ್ದೇಶಕರು ಬರೆದುಕೊಂಡಿದ್ದಾರೆ. 2018ರ ಆಗಸ್ಟ್ನಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
Advertisement