ಸಂಜನಾ ಗಲ್ರಾನಿ
ಸಿನಿಮಾ ಸುದ್ದಿ
ವಿಶ್ರಾಂತಿ ಮೊರೆ ಹೋದ ನಟಿ ಸಂಜನಾ ಗಲ್ರಾನಿ
ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಡ್ರಗ್ಸ್ ಜಾಲ ಪ್ರಕರಣದಲ್ಲಿ ಮೂರು ತಿಂಗಳು ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಇತ್ತೀಚೆಗೆ ಬಿಡುಗಡೆ ಹೊಂದಿರುವ ನಟಿ ಸಂಜನಾ ಗಲ್ರಾನಿ ಯಲಹಂಕ ಬಳಿಯ ರೆಸಾರ್ಟ್ ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಬೆಂಗಳೂರು: ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಡ್ರಗ್ಸ್ ಜಾಲ ಪ್ರಕರಣದಲ್ಲಿ ಮೂರು ತಿಂಗಳು ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಇತ್ತೀಚೆಗೆ ಬಿಡುಗಡೆ ಹೊಂದಿರುವ ನಟಿ ಸಂಜನಾ ಗಲ್ರಾನಿ ಯಲಹಂಕ ಬಳಿಯ ರೆಸಾರ್ಟ್ ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಕಳೆದ ಡಿ.10ರ ರಾತ್ರಿ 9 ಗಂಟೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದು ಈವರೆಗೂ ಯಾರ ಸಂಪರ್ಕಕ್ಕೂ ಸಿಗದ ಸಂಜನಾ ನೇರವಾಗಿ ರೆಸಾರ್ಟ್ ಗೆ ತೆರಳಿದ್ದಾರೆ. ಯಾರ ಮೊಬೈಲ್ ಕರೆಯನ್ನೂ ಸ್ವೀಕರಿಸದೆ ನೇರವಾಗಿ ಪೋಷಕರ ಜೊತೆ ರೆಸಾರ್ಟ್ ಸೇರಿದ್ದಾರೆ.
ಯಲಹಂಕದ ಹೊರ ವಲದಲ್ಲಿರುವ ಅಂಗ್ ಸಾನ್ ರೆಸಾರ್ಟ್ನಲ್ಲಿ ಸಂಜನಾ ಇರುವ ಬಗ್ಗೆ ಮಾಹಿತಿ ಇದೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ವಿಶ್ರಾಂತಿಗಾಗಿ ರೆಸಾರ್ಟ್ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ