ನಟಿ ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರ: ಮೌಲ್ವಿ ವಿರುದ್ಧ ದೂರು ದಾಖಲು

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಮೂರು ತಿಂಗಳು ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಹೊಂದಿರುವ ನಟಿ ಸಂಜನಾ ಗಲ್ರಾನಿ ಅವರಿಗೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು ನಟಿ ಸಂಜನಾ ಅವರನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಲಾಗಿದೆ ಎಂದು ಆರೋಪಿಸಿ ಬೆಂಗಳೂರು ನಗರದ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.
ಸ್ಯಾಂಡಲ್ ವುಡ್ ನಟಿ ಸಂಜನಾ ಅವರನ್ನು ಬಲವಂತವಾಗಿ ಹಿಂದೂ ಧರ್ಮದಿಂದ ಇಸ್ಲಾಂ ಗೆ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ಟ್ಯಾನರಿ ರಸ್ತೆಯ ದಾರುಲ್ ಉಲಮ್ ಶಾವಲಿಲುಲ್ಲಾ ಎಂಬ ಮೌಲ್ವಿ ವಿರುದ್ಧ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಕೀಲ ಅಮೃತೇಶ್ ಎನ್ನುವವರು ಮೌಲ್ವಿ ವಿರುದ್ಧ ದೂರು ಸಲ್ಲಿಸಿದ್ದಾರೆ.
ದೂರಿನ ಅನುಸಾರ ನಟಿ ಸಂಜನಾ ಅವರನ್ನು 09 ಅಕ್ಟೋಬರ್ 2018 ರಂದು ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರ ಮಾಡಲಾಗಿದೆ. ಅಲ್ಲದೆ ಅವರಿಗೆ "ಮಹಿರಾ" ಎಂದು ಮರುನಾಮಕರಣ ಸಹ ಮಾಡಿದ್ದಾರೆ. ಇದಕ್ಕೆ ದಾಖಲೆಯಾಗಿ ಮರುನಾಮಕರಣ ಮಾಡಿದ ಪ್ರಮಾಣಪತ್ರ ಸಹ ನೀಡಲಾಗಿದೆ. ಆದರೆ ಈ ಮತಾಂತರ ನಟಿಯ ಇಚ್ಚೆಗೆ ವಿರುದ್ಧ, ಬಲವಂತದಿಂದ ನಡೆದಿದೆ ಎಂದು ಎಫ್ಐಆರ್ ದಾಖಲಾಗಿದೆ.
ಈ ಸಂಬಂಧ ಕಾಟನ್ಪೇಟೆ ಪೊಲೀಸರು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸಲು ತೀರ್ಮಾನಿಸಿದ್ದಾರೆ.
ನಟಿ ಸಂಜನಾ ಕಾರ್ಡಿಯಾಲಜಿಸ್ಟ್ ಆಗಿರುವ ಡಾ. ಅಜೀಜ್ ಎನ್ನುವವರೊಂದಿಗೆ ಮದುವೆಯಾಗಿದ್ದರೆಂದು ಹೇಳಲಾಗುವ ಫೋಟೋ ಒಂದು ಕೆಲ ದಿನಗಳ ಹಿಂದೆ ಸಾಮಾಜಿಕ ತಾಣದಲ್ಲಿ ಹರಿದಾಡಿತ್ತು. ಆ ವೇಳೆ ಸಂಜನಾ ಇಸ್ಲಾಂಗೆ ಮತಾಂತರವಾಗಿ ಹೆಸರು ಬದಲಿಸಿಕೊಂಡಿದ್ದರೆಂಬ ಬಗ್ಗೆ ದಾಖಲೆಗಳು ಸಿಕ್ಕಿವೆ ಎನ್ನಲಾಗಿತ್ತು.
ಈ ನಡುವೆ ಜೈಲಿನಿಂದ ಹೊರಬಂದಿರುವ ಸಂಜನಾ ಯಲಹಂಕ ಬಳಿಯ ರೆಸಾರ್ಟ್ ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


