ಕಾಶ್ಮೀರದಲ್ಲಿ ರಕ್ಷಿತ್ ಶೆಟ್ಟಿಯ ಚಾರ್ಲಿ 777 ಕ್ಲೈಮ್ಯಾಕ್ಸ್ ಶೂಟಿಂಗ್

2021ರ ಅಧಿಕ ಹಿಮಪಾತದಲ್ಲಿ ಕಾಶ್ಮೀರದಲ್ಲಿ ರಕ್ಷಿತ್ ಶೆಟ್ಟಿಯ ಚಾರ್ಲಿ 777 ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯಲಿದೆ.
ಚಾರ್ಲಿ ಸಿನಿಮಾ ಸ್ಟಿಲ್
ಚಾರ್ಲಿ ಸಿನಿಮಾ ಸ್ಟಿಲ್
Updated on

2021ರ ಅಧಿಕ ಹಿಮಪಾತದಲ್ಲಿ ಕಾಶ್ಮೀರದಲ್ಲಿ ರಕ್ಷಿತ್ ಶೆಟ್ಟಿಯ ಚಾರ್ಲಿ 777 ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯಲಿದೆ.

ಪರಮ್ವಾ ಸ್ಟುಡಿಯೋಸ್ ಮತ್ತು ಪುಷ್ಕರ್ ಫಿಲ್ಮ್ ಬ್ಯಾನರ್ ನಲ್ಲಿ ಸಿದ್ಧವಾಗುತ್ತಿದೆ. ಚಿತ್ರಕ್ಕೆ ಕಿರಣ್ ರಾಜ್ ಆಕ್ಷನ್ ಹೇಳುತ್ತಿದ್ದಾರೆ. ಚಾರ್ಲಿ ಸಿನಿಮಾ ಕೊನೆಯ ಹಂತದ ಶೂಟಿಂಗ್ ತಲುಪಿದ್ದು, ಸದ್ಯ ಚಿತ್ರ ತಂಡ 14 ದಿನಗಳ ಕಾಲ ಕಾಶ್ಮೀರ, ಚಂಡಿಗಡ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಶೂಟಿಂಗ್ ನಡೆಸಲಿದೆ.

ಅನುಕೂಲಕ್ಕಾಗಿ ಎರಡು ಭಾಗಗಳಾಗಿ ಶೂಟಿಂಗ್ ಶೆಡ್ಯೂಲ್ ಮಾಡಲಾಗಿದೆ.ಈಗಾಗಲೇ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿದೆ ಇದೊಂದು ದೊಡ್ಡ ಅನುಭವ ಎಂದು ನಿರ್ದೇಶಕ ಕಿರಣ್ ರಾಜ್ ತಿಳಿಸಿದ್ದಾರೆ.

ಭಾರೀ ಪ್ರಮಾಣದ ಹಿಮಪಾತದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಮಾಡಬೇಕೆಂದು ನಿರ್ದೇಶಕರು ತೀರ್ಮಾನಿಸಿದ್ದಾರೆ. ಹೀಗಾಗಿ ಜನವರಿ ಮೊದಲ ವಾರದಲ್ಲಿ ಚಾರ್ಲಿ ಸಿನಿಮಾ ಶೂಟಿಂಗ್ ಗಾಗಿ ಕಾಶ್ಮೀರಕ್ಕೆ ತೆರಳಲು ನಿರ್ಧರಿಸಿದ್ದಾರೆ.

ಇದು 2021 ರಲ್ಲಿ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಚಿತ್ರ ಐದು ಭಾಷೆಗಳಲ್ಲಿ ಹೊರಬರಲಿದೆ.  ಇದನ್ನು ಕನ್ನಡದಲ್ಲಿ ತಯಾರಿಸಲಾಗುತ್ತಿದ್ದು, ಇದನ್ನು ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುವುದು. ಚಿತ್ರಕ್ಕೆ ನೊಬಿನ್ ಪೌಲ್ ಸಂಗೀತವಿದ್ದು, ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

ಹೈದರಾಬಾದ್ ಮೂಲದ ನಟ ಬಾಬಿ ಸಿಂಹ ಖ್ಯಾತಿ ಗಳಿಸಿದ್ದು ತಮಿಳು ಸಿನಿಮಾರಂಗದಲ್ಲಿ. ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ಬಾಬಿ ಸಿಂಹ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಬಣ್ಣಹಚ್ಚುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com