ಪ್ರತಿಭಟನಾನಿರತ ರೈತರಿಗೆ ಬೆಂಬಲ ನೀಡಿ ಒಪ್ಪೊತ್ತಿನ ಊಟ ಬಿಟ್ಟ ನಟಿ ರಮ್ಯಾ!

ದೇಶದಾದ್ಯಂತ ಬುಧವಾರ ರೈತರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ನಡುವಲ್ಲೇ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ವಿಶೇಷವಾಗಿ ಬೆಂಬಲ ನೀಡುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. 
ನಟಿ ರಮ್ಯಾ
ನಟಿ ರಮ್ಯಾ
Updated on: 

ಬೆಂಗಳೂರು: ದೇಶದಾದ್ಯಂತ ಬುಧವಾರ ರೈತರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ನಡುವಲ್ಲೇ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ವಿಶೇಷವಾಗಿ ಬೆಂಬಲ ನೀಡುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. 

ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ನೀಡುವ ಸಲುವಾಗಿ ರಮ್ಯಾ ಅವರು ಇಂದು ಮಧ್ಯಾಹ್ನದ ಊಟವನ್ನು ತ್ಯಜಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬರೆದುಕೊಂಡಿರುವ ರಮ್ಯಾ ಅವರು, ಕಿಸಾನ್ ದಿನವಾಗಿರುವ ಇಂದು ರೈತರಿಗೆ ಬೆಂಬಲ ಸೂಚಿಸುವ ಹಿನ್ನೆಲೆಯಲ್ಲಿ ನಾನಿಂದು ಮಧ್ಯಾಹ್ನದ ಊಟವನ್ನು ತ್ಯಜಿಸುತ್ತಿದ್ದೇನೆ. ಕೇಂದ್ರದ ಕೃಷಿ ನೀತಿಯನ್ನು ವಿರೋಧಿಸಿ ರೈತರು ಆಗಸ್ಟ್ 9 ರಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಮೋದಿ ಸರ್ಕಾರ ಮಾತ್ರ ನಿಶ್ಚಿಂತತೆಯಿಂದ ಇದ್ದು, ಕಾನೂನು ರದ್ದುಗೊಳಿಸಲು ನಿರಾಕರಿಸಿದೆ. ಮೋದಿ ಸರ್ಕಾರ ರೈತರ ಪರ ಇರುವ ಬದರು ತಮ್ಮ ಕಾರ್ಪೊರೇಟ್ ಸ್ನೇಹಿತರನ್ನು ಮಾತ್ರ ಬೆಂಬಲಿಸುತ್ತಿದೆ ಎಂದು ಕಿಡಿಕಾರಿದ್ದಾರೆ. 

ಮತ್ತೊಂದು ಪೋಸ್ಟ್ ನಲ್ಲಿ ಉತ್ತರಪ್ರದೇಶದಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ ಟಿಕೈಟ್ ಅವರು, ದೇಶದಾದ್ಯಂತ ರೈತರ ದಿನದಂದು ಮಧ್ಯಾಹ್ನ ಊಟವನ್ನು ತ್ಯಜಿಸಬೇಕೆಂದು ಕರೆ ನೀಡಿದ್ದಾರೆ. 

ಮೋದಿ ಸರ್ಕಾರದ ರೈತ ವಿರೋಧಿ ನೀತಿಯಿಂದ ಇಡೀ ದೇಶಕ್ಕೆ ಅನ್ನ ನೀಡುವ ಅನ್ನದಾತರು ಇಂದು ಹಸಿದಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ದಿನಾಚರಣೆಯಂದು ಮನೆಯಲ್ಲಿ ಅಡುಗೆ ಮಾಡದೆ ರೈತರಿಗೆ ಬೆಂಬಲ ನೀಡಿ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com