ಲವ್ ಮಾಕ್ಟೇಲ್ ಖ್ಯಾತಿಯ ಡಾರ್ಲಿಂಗ್ ಕೃಷ್ಣ ನಟನೆಯ ಶುಗರ್‌ಫ್ಯಾಕ್ಟರಿ ಸಿನಿಮಾದ ಕುರಿತು ದಿನಕ್ಕೊಂದು ಸುದ್ದಿ ಕೇಳಿ ಬರುತ್ತಿದೆ. ಈ ಸಿನಿಮಾವನ್ನು ಖ್ಯಾತ ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿರ್ದೇಶನ ಮಾಡುತ್ತಿದ್ದಾರೆ.
ಈ ಚಿತ್ರದಲ್ಲಿ ಮೂವರು ನಾಯಕಿಯರಿದ್ದು ಕಡಲೂರಿನ ಚೆಲುವೆಯರಾದ ಸೋನಲ್ ಮೊಂತೆರೊ ಹಾಗೂ ಅದ್ವಿತಿ ಶೆಟ್ಟಿ ನಾಯಕಿಯರಾಗಿ ಆಯ್ಕೆಯಾಗಿದ್ದರು. ಮೂರನೇ ನಾಯಕಿ ಯಾರು ಎಂಬ ಕುತೂಹಲಕ್ಕೆ ಈಗ ಬ್ರೇಕ್ ಬಿದಿದ್ದು ಗ್ಲಾಮರ್ ಗೊಂಬೆ ಶಿಲ್ಪಾ ಶೆಟ್ಟಿ ಮೂರನೇ ನಾಯಕಿಯಾಗಿ ಶುಗರ್ ಫ್ಯಾಕ್ಟರಿ ಸೇರಿದ್ದಾರೆ.
ಶಿಲ್ಪಾ ಶೆಟ್ಟಿ ಅಂದಾಕ್ಷಣ ಬಾಲಿವುಡ್ ನಟಿ ಅಂದೊಳ್ಳುಬೇಡಿ. ತುಳು ಮತ್ತು ಕನ್ನಡದ ಕೆಲವು ಧಾರಾವಾಹಿಗಳಲ್ಲಿ ನಟಿಸಿರುವ ನಟಿ ಸುಂದರಿ ಶಿಲ್ಪಾ ಶೆಟ್ಟಿ. ಇದೀಗ ಶುಗರ್ ಫ್ಯಾಕ್ಟರಿ ಮೂಲಕ ಬೆಳ್ಳಿ ಪರದೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ.
ಶುಗರ್ ಫ್ಯಾಕ್ಟರಿ ಸಿನಿಮಾ ಮುಂದಿನ ತಿಂಗಳು ಜನವರಿ 28ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಮೊದಲು ಮನಸಾಲಜಿ ಎನ್ನುವ ಸಿನಿಮಾ ಮಾಡಿದ್ದ ದೀಪಕ್ ಇದೀಗ ಶುಗರ್ ಫ್ಯಾಕ್ಟರಿ ಮೂಲಕ ಎರಡನೇ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಬಳಿಕ ಗೋವಾ, ಮೈಸೂರು ಮತ್ತು ವಿದೇಶದಲ್ಲೂ ಚಿತ್ರೀಕರಣ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದ್ದಾರೆ. ಬಾಲಮಣಿ ಪ್ರೊಡಕ್ಷನ್ ನಲ್ಲಿ ಆರ್ ಗಿರೀಶ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
Advertisement