ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಕ್ರಿಯ ಸದಸ್ಯ ಮತ್ತು ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡದ ಖ್ಯಾತ ನಿರ್ಮಾಪಕ ಎನ್ ಎಂ ಸುರೇಶ್ ಅವರು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ (ಎಫ್‌ಎಫ್‌ಐ) ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷರಾಗಿ ಕೊಲ್ಕತ್ತಾದ ಫರ್ದಾಸುಲ್ ಹಸನ್ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಉಪಾಧ್ಯಕ್ಷರಾಗಿ ಕರ್ನಾಟಕದಿಂದ ಕೆಸಿಎನ್ ಚಂದ್ರಶೇಖರ್ ಆಯ್ಕೆಯಾಗಿದ್ದರು.
ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಹತ್ತಕ್ಕಿಂತ ಹೆಚ್ಚು ಉಪಾಧ್ಯಕ್ಷ ಸ್ಥಾನ ಇದ್ದು ಹೈದರಾಬಾದ್, ಚೆನ್ನೈ, ಕೊಲ್ಕತ್ತಾ, ದೆಹಲಿ, ಮುಂಬೈ ಸೇರಿದಂತೆ ಎಲ್ಲ ಚಿತ್ರರಂಗಗಳ ಪ್ರತಿನಿಧಿಗಳು ಉಪಾಧ್ಯಕ್ಷರಾಗಿದ್ದಾರೆ.
ನಿರ್ಮಾಪಕ ಸುರೇಶ್ ಪ್ರೇಮ್ ನಿರ್ದೇಶನದ "ಎಕ್ಸ್‌ಕ್ಯೂಸ್‌ಮಿ", "ಅದ್ವೈತಾ", "7 ಓ ಕ್ಲಾಕ್"ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಿಸಿದ್ದಾರೆ
Advertisement