ಧನಂಜಯ್ ಮುಂದಿನ ಸಿನಿಮಾಗೆ ಕಥೆ ಸಿದ್ಧಪಡಿಸುತ್ತಿದ್ದಾರೆ ಸತ್ಯ ಪ್ರಕಾಶ್ 

ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುವ ಧನಂಜಯ್ ಬಗ್ಗೆ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ.
ಡಾಲಿ ಧನಂಜಯ್
ಡಾಲಿ ಧನಂಜಯ್
Updated on

ಬೆಂಗಳೂರು:  'ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುವ ಧನಂಜಯ್ ಬಗ್ಗೆ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ.

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ ಧನಂಜಯ್ ಈಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 

ಒಂದಲ್ಲ ಎರಡಲ್ಲ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್,ಮಂಕಿ ಸೀನನಿಗೆ ನಿರ್ದೇಶನ ಮಾಡುತ್ತಿದ್ದಾರಂತೆ. 'ಜಯನಗರ 4th ಬ್ಲಾಕ್' ಎನ್ನುವ ಕಿರು ಚಿತ್ರದ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಈಗ ಮತ್ತೆ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ಈಗಾಗಲೆ ಸತ್ಯ ಪ್ರಕಾಶ್ ಸ್ಕ್ರಿಪ್ಟ್ ಕೆಲಸ ಶುರುಮಾಡಿಕೊಂಡಿದ್ದಾರಂತೆ. ಇದು ಪಕ್ಕಾ ಕಮರ್ಶಿಯಲ್ ಸಿನಿಮಾವಾಗಿದ್ದು, ಚಿತ್ರದಲ್ಲಿ ಧನಂಜಯ್ ಎರಡು ಶೇಡ್ ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ಈ ಸಿನಿಮಾ ಮಾರ್ಚ್ ನಲ್ಲಿ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಈಗಾಗಲೆ ಧನಂಜಯ್ ಬಳಿ ಸಾಕಷ್ಟು ಸಿನಿಮಾಗಳಿವೆ. 

ಧನಂಜಯ್ ಬಳಿ ಡಾಲಿ, ಬಡವ ರಾಸ್ಕಲ್, ಯುವರ್ತನ, ಪೊಗರು ಮತ್ತು ಇತ್ತೀಚಿಗೆ ಅನೌನ್ಸ್ ಆದ ಭೂಗತ ಪಾತಕಿ ಎಂ.ಪಿ ಜಯರಾಜ್ ಸಿನಿಮಾ ಸೇರಿದಂತೆ ಸಾಕಷ್ಟು ಸಿನಿಮಾಗಲಿವೆ. ಈ ಎಲ್ಲಾ ಸಿನಿಮಾಗಳು ಮುಗಿದ ಬಳಿಕ ಸತ್ಯ ಪ್ರಕಾಶ್ ಮತ್ತು ಧನಂಜಯ್ ಹೊಸ ಸಿನಿಮಾ ಶುರುವಾಗಲಿದೆ. 

ಅಂದ್ಹಾಗೆ ಸತ್ಯ ಪ್ರಕಾಶ್ ಕೂಡ ಸದ್ಯ ಬ್ಯುಸಿ ಇದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬ್ಯಾನರ್ ನಲ್ಲಿ ಸತ್ಯ ಪ್ರಕಾಶ್ ಸಿನಿಮಾ ಮಾಡುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com