ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್​ ಜನ್ಯಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಮ್ಯಾಜಿಕಲ್ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಅರ್ಜುನ್ ಜನ್ಯ
ಅರ್ಜುನ್ ಜನ್ಯ
Updated on: 

ಮೈಸೂರು: ಮ್ಯಾಜಿಕಲ್ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಅರ್ಜುನ್​ ಜನ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿರುವಾಗ ಹೃದಯಾಘಾತಕ್ಕೊಳಗಾಗಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಸಮೀಪದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸಂಗೀತ ದಿಗ್ಗಜನಿಗೆ ಲಘು ಹೃದಯಾಘಾತವಾಗಿರುವ ಬಗ್ಗೆ ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ತಡರಾತ್ರಿಯಿಂದಲೇ ಅರ್ಜುನ್ ಜನ್ಯ ಅವರಿಗೆ ಚಿಕಿತ್ಸೆ ಆರಂಭಿಸಿದ್ದು, ರಾತ್ರಿಯೇ ಆ್ಯಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆಯಂತೆ. 

ಅರ್ಜುನ್​ ಜನ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಸದ್ಯ ಅವರ  ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆ ಮುಂದುವರೆಸಿರುವ ವೈದ್ಯರು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟಿದ್ದಾರೆ.

ಸ್ಟಾರ್ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿರುವ ಅರ್ಜುನ್ ಜನ್ಯ ಹಲವು ಚಿತ್ರಗಳಿಗೆ ಮ್ಯೂಸಿಕ್ ನೀಡಿದ್ದಾರೆ.. ಸಂಗೀತ ನಿರ್ದೇಶನದ ಜೊತೆಗೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಗುರುತಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com